ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕೆಂಚನದೊಡ್ಡಿ ಮತ್ತು ಚೊಟ್ಟನಹಳ್ಳಿ ಗ್ರಾಮಗಳ ಪರಿಮಿತಿಯಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವ್ಯಕ್ತಿಗೆ ಆಗತ್ಯವಿರುವ ಕೌಶಲ್ಯ ಮತ್ತು ಜ್ಞಾನವನ್ನು ನೀಡಿ ಉದ್ಯೋಗದ ಮೂಲಕ ಆರ್ಥಿಕ ಸದೃಢಗೊಳಿಸುವ ಶಿಕ್ಷಣಕ್ಕೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಕಾಲೇಜು ಕಟ್ಟಡ ನಿರ್ಮಾಣ, ಪಾಲಿಟೆಕ್ನಿಕ್ ಕಾಲೇಜು ಅನುಷ್ಠಾನದ ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ಮಲ್ಪಿಮೀಡಿಯಾ ಸ್ಥಾಪಿಸಿ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯಕ್ಕಾಗಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ತಾಲೂಕಿಗೆ ತಂದಿದ್ದೇನೆ. ಇಲ್ಲಿನ ವೈದ್ಯರು ಗರ್ಭಾವಸ್ಥೆಯ ನಿಯಮಿತ ತಪಾಸಣೆ, ಸುರಕ್ಷಿತ ಹೆರಿಗೆ ನಂತರ ತಾಯಿ ಮಗುವಿನ ಆರೈಕೆ, ನವಜಾತ ಶಿಶುಗಳಿಗೆ ತುರ್ತು ಅರೈಕೆ ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ರೋಗಿಗಳು ಅಲ್ಲದೇ ಹೊರ ಜಿಲ್ಲೆಗಳಿಂದಲೂ ತಾಲೂಕು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.ತಾಲೂಕು ಆಸ್ಪತ್ರೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಮೂಲಕ ಹಲವು ರೀತಿಯ ಶಸ್ತ್ರ ಚಿಕಿತ್ಸೆ, ಎಲ್ಲಾ ಮಾದರಿ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ವಿಶೇಷ ಸೌಲಭ್ಯಗಳಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನಿರುದ್ಯೋಗವನ್ನು ಹೋಗಲಾಡಿಸಿ ಯುವಕರು ಸ್ವ ಉದ್ಯೋಗ ಪಡೆದುಕೊಳ್ಳುವ ಉದ್ದೇಶದಿಂದ ಜಾರಿಗೆ ತಂದಿರುವ ಕೆಎಸ್‌ಆರ್‌ಟಿಸಿ ಚಾಲಕ ತರಬೇತಿ ಕೇಂದ್ರದಲ್ಲಿ ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ವಾಹನ ಚಾಲನಾ ತರಬೇತಿ ಪಡೆದು ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ತ್ರೀ ಶಕ್ತಿ ಭವನದಲ್ಲಿ ಮಹಿಳೆಯರು ಹೊಲಿಗೆ ತರಬೇತಿ ಪಡೆದು ಜೀವನ ಕಟ್ಟಿಕೊಳ್ಳುತ್ತಿದ್ದಾರೆ. ಆಧುನಿಕ ಮೀನು ಮಾರುಕಟ್ಟೆ ನಿರ್ಮಾಣದಿಂದ ಮೀನುಗಾರರಿಗೆ ಮೀನು ಮಾರಾಟ ಮಾಡಲು ಅನುಕೂಲವಾಗಿದೆ ಎಂದು ಮಾಹಿತಿ ನೀಡಿದರು.
ಕ್ಷೇತ್ರಕ್ಕೆ ಬೇಕಾದ ಎಲ್ಲಾ ಮೂಲ ಸೌಲಭ್ಯವನ್ನು ಕಲ್ಪಿಸಿರುವ ತೃಪ್ತಿ ನನಗಿದೆ. ಸಚಿವರಾಗಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಕ್ಷೇತ್ರದ ಜನರ ಋಣವನ್ನು ತೀರಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
-----------------
ಮಳವಳ್ಳಿ ತಾಲೂಕಿನ ಕೆಂಚನದೊಡ್ಡಿ ಮತ್ತು ಚೊಟ್ಟನಹಳ್ಳಿ ಗ್ರಾಮಗಳಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.