ಹನುಮಸಾಗರ:
ಗ್ರಾಮದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಹನುಮಸಾಗರ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿದೆಯೋ, ಇಲ್ಲವೋ ಎಂಬ ಸದುದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಸಭೆ ಮಾಡುತ್ತಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ಕಾರ್ಯಕ್ರಮ ಮಾಡಿದಾಗ ಎಲ್ಲ ಅಧಿಕಾರಿಗಳು ಬರುತ್ತಾರೆ. ಕಾಮಗಾರಿಯ ಬಗ್ಗೆ ಸಮರ್ಪಕ ಮಾಹಿತಿ ಸಿಗುತ್ತದೆ ಎಂದರು.ಕುಷ್ಟಗಿ ತಾಲೂಕಿನ ಮುದೇನೂರು ಹಾಗೂ ಹೂಲಗೇರ ಗ್ರಾಮ ಸಂಸದರ ದತ್ತು ಗ್ರಾಮಕ್ಕೆ ಆಯ್ಕೆಯಾಗಿದೆ. ಈ ಕುರಿತು ಗ್ರಾಮದಲ್ಲಿ ಸರ್ವೇ ಕಾರ್ಯ ಮಾಡಲಾಗುವುದು, ನೆಡತೋಪು, ಗೋದಾಮು, ಅಂಗನವಾಡಿ, ಸಿಸಿ ರಸ್ತೆ, ಚರಂಡಿ, ಸ್ಮಶಾನ ಅಭಿವೃದ್ಧಿ, ಶೌಚಾಲಯ ಹಾಗೂ ವೈಯಕ್ತಿಕ ಕಾಮಗಾರಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಎಲ್ಲ ಕಾಮಗಾರಿ ಒಳಗೊಂಡು ₹ ೧೦ಕೋಟಿಗೂ ಹೆಚ್ಚು ಮೊತ್ತದ ಕ್ರಿಯಾಯೋಜನೆ ಅನುಮೋದನೆಗೆ ಜಿಪಂಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಸಂಸದ ಕೆ.ರಾಜಶೇಖರ ಹಿಟ್ನಾಳ ಮಾತನಾಡಿ, ಗ್ರಾಮದ ಎಲ್ಲ ವಾರ್ಡ್‌ಗಳಲ್ಲಿ ನೀರು ಸರಿಯಾಗಿ ಒದಗಿಸಬೇಕು ಎಂದರು.
ಈ ವೇಳೆ ತಾಪಂ ಇಒ ಪಂಪಾಪತಿ ಹಿರೇಮಠ, ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪಗೌಡರ, ದಿಶಾ ಸಮಿತಿ ಸದಸ್ಯ ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ, ಗ್ಯಾರಂಟಿ ಯೋಜನೆ ಅಧ್ಯಕ್ಷ ಫಾರೂಕ್ ದಲಾಯತ, ಕೆಡಿಪಿ ಸದಸ್ಯ ಕರಡಿ, ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ವಿ.ಎಚ್., ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಿಡಿಒ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕೆಡಿಪಿ ಹಾಗೂ ವಿವಿಧ ಸಮಿತಿಯ ಸದಸ್ಯರು ಇದ್ದರು.