ದಾಂಡೇಲಿ: ಆ.೧೫ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ನಗರದ ತಾಲೂಕು ಆಡಳಿತ ಸೌದದಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆಯಿಂದ ಪೂರ್ವಭಾವಿ ಸಭೆಯು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ತಹಶೀಲ್ದಾರ ಶೈಲೇಶ ಪರಮಾನಂದ ಮಾತನಾಡಿ, ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆ.೧೫ರಂದು ಬೆಳಿಗ್ಗೆ ೮ ಗಂಟೆಗೆ ನಗರಸಭೆ ಮತ್ತು ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಬೆಳಿಗ್ಗೆ ೯.೩೦ ಗಂಟೆಗೆ ಹಳೆ ನಗರಸಭೆಯ ಮೈದಾನದಲ್ಲಿ ಸಾರ್ವಜನಿಕ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮತ್ತು ಕಾರ್ಯಕ್ರಮಗಳು ನಡೆಯಲಿವೆ. ಎಲ್ಲ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಉಪನ್ಯಾಸಕರು, ನಿವೃತ್ತ ಸೈನಿಕರು ಮುಂತದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಕರೆನೀಡಿದರು.
ಪೌರಾಯುಕ್ತ ವಿವೇವಕ ಬನ್ನೆ ಮಾತನಡಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.ಸಭೆಯಲ್ಲಿ ನಗರಸಭೆಯ ಉಪಾಧ್ಯಕ್ಷೆ ಶೀಲ್ಪಾ ಕೊಡೆ, ನಗರಸಭೆಯ ಸದಸ್ಯರಾದ ಮೋಹನ ಹಲವಾಯಿ, ಸಂಜಯ ನಂದ್ಯಾಳಕರ, ರುಕ್ಮೀಣಿ ಬಾಗಡೆ, ಅನೀಲ ನಾಯಕರ, ಮಹಾದೇವ ಜಮಾದಾರ, ಪ್ರೀತಿ ನಾಯರ, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಟಿ.ಸಿ.ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ಪಿಎಸ್‌ಐ ಅಮೀನ ಅತ್ತಾರ, ವಲಯ ಅರಣ್ಯಾಧಿಕಾರಿ ನದಾಫ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್. ರಾಠೋಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರೇಖಾ ಗಾಂವಕರ, ಬಂಗೂರ ನಗರ ಪಪೂ ಕಾಲೇಜಿನ ಪ್ರಾಂಶುಪಾಲೆ ಆಶಾಲತಾ ಜೈನ್, ಸಿಆರ್‌ಪಿ ಲಲೀತಾ, ನಗರಸಭೆಯ ಅಧಿಕಾರಿಗಳಾದ ಮೈಕಲ್ ಫರ್ನಾಂಡಿಸ್, ಬಾಳು ಗವಾಸ, ಶಾಲಾ ಕಾಲೇಜುಗಳ ಶಿಕ್ಷಕರು, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.