ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

KannadaprabhaNewsNetwork |  
Published : May 31, 2026, 03:15 AM IST
(ಫೋಟೊ 30ಬಿಕೆಟಿ1.(1) ಹೊಸ ಶೈಕ್ಷಣಿಕ ವರ್ಷದ ಆರಂಭದ ಹಿನ್ನಲೆಯಲ್ಲಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ.) | Kannada Prabha

ಸಾರಾಂಶ

ಹೊಸ ಶೈಕ್ಷಣಿಕ ವರ್ಷದ ಆರಂಭದ ಹಿನ್ನಲೆಯಲ್ಲಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹೊಸ ಶೈಕ್ಷಣಿಕ ವರ್ಷದ ಆರಂಭದ ಹಿನ್ನಲೆಯಲ್ಲಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲಕ್ಕೆ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲಾಧಿಕಾರಿ ಸಂಗಪ್ಪ ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜಿ. ಮನ್ನಿಕೇರಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿದ್ದು, ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ವಿಶೇಷ ಸಿದ್ಧತೆ ಕೈಗೊಳ್ಳುತ್ತಿದೆ. ಶಾಲಾ ಆವರಣವನ್ನು ತೋರಣ, ಬಲೂನ್ ಹಾಗೂ ಬಣ್ಣ ಬಣ್ಣದ ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಮಕ್ಕಳಲ್ಲಿ ಶಾಲೆಯ ಬಗ್ಗೆ ಉತ್ಸಾಹ ಮೂಡಿಸುವ ರೀತಿಯಲ್ಲಿ ಸಜ್ಜುಗೊಳಿಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್‌ ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷೆ ಕಲಿಕೆ ಪ್ರಾರಂಭಿಸಲಾಗುತ್ತಿದೆ. ಕೆ.ಜಿ.ಎಸ್, ಪಿ.ಎಂ.ಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆ.ಜಿ.ಬಿ.ವಿ ಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುತ್ತಿದೆ. ರಾಗಿ ಮಾಲ್ಟ್‌, ಸಕ್ಕರೆ ಮಿಶ್ರಿತ ಹಾಲು, ರುಚಿಕಟ್ಟಾದ ಮಧ್ಯಾಹ್ನದ ಬಿಸಿಊಟ, ಮೊಟ್ಟೆ, ಬಾಳೆಹಣ್ಣುಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ್‌ ಕ್ಲಾಸ್‌ಗಳ ಲಭ್ಯತೆಯಿಂದ ಕಲಿಕೆ ಉತ್ತೇಜಿಸಲಾಗುತ್ತಿದೆ. ಈ ವರ್ಷದಿಂದ ಮೌಲ್ಯ ಶಿಕ್ಷಣದ ಪಠ್ಯಪುಸ್ತಕಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಲಿಸುವ ಕೆಲಸ ನಡೆಯಲಿದೆ. ಪೂರ್ವ ಪ್ರಾಥಮಿಕ ಶಿಕ್ಷಣ, ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಿಕ್ಷಣ ನೀಡಲಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಪಾಲಕರಿಗೆ ಆರ್ಥಿಕ ಹೊರೆ ಇರುವುದಿಲ್ಲ. ಆದ್ದರಿಂದ ಪಾಲಕರು ಅಥವಾ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ. ಮನ್ನಿಕೇರಿ ಹಾಗೂ ತಂಡದೊಂದಿಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಸಕರ್ಕಾರಿ ಶಾಲೆಗಳ ಶೈಕ್ಷಣಿಕ ಶ್ರೇಷ್ಠತೆ: ಸರ್ಕಾರಿ ಶಾಲೆಗಳಲ್ಲಿ ಸಮಾಜಿಕ ಸಮಾನತೆ ಸಾರಲಾಗುತ್ತಿದ್ದು, ಬೇಧಭಾವವಿಲ್ಲದ, ಭಾತೃತ್ವದ ನೆಲೆಗಟ್ಟಿನ ಶಿಕ್ಷಣ ನೀಡಿ ಮಾನವೀಯ ಮೌಲ್ಯಗಳನ್ನು ರೂಢಿಸಲಾಗುತ್ತಿದೆ. ಸರಳ ಬದುಕು, ಉನ್ನತ ಚಿಂತನೆಗಳ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ಸಾಕಾರ ಮಾಡಲಾಗುತ್ತಿದೆ. ಗ್ರಾಮೀಣ, ನಗರ ಭಾಗಗಳಲ್ಲಿ ಸರ್ವರಿಗೂ ಶಿಕ್ಷಣ ನೀಡಿ ಸಾಮಾಜಿಕ ಒಗ್ಗಟ್ಟನ್ನು ಮೂಡಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದವರು ಶ್ರೇಷ್ಟ ಹುದ್ದೆಗಳಲ್ಲಿ ಹಾಗೂ ವಿವಿಧ ಸಾಮಾಜಿಕ ಸ್ಥಾನಮಾಗಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾತಂತ್ರ್ಯ ನಂತರ ಇಂಡಿ ಮತಕ್ಷೇತ್ರಕ್ಕೆ ಸಚಿವಗಿರಿ?
ಆರ್.ಬಿ. ತಿಮ್ಮಾಪೂರಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ