ಅಳ್ನಾವರ ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಯಾಗಲಿ: ಮಂಜುನಾಥ ಭಾರತಿ ಸ್ವಾಮೀಜಿ ಆಗ್ರಹ

KannadaprabhaNewsNetwork |  
Published : Jan 04, 2025, 12:31 AM IST
3ಎಚ್.ಎಲ್.ವೈ-2:  ಶುಕ್ರವಾರ ಹಳಿಯಾಳಕ್ಕೆ ಆಗಮಿಸಿದ ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಮರಾಠ ಭವನದ ತಮ್ಮ ಕುಠೀರದಲ್ಲಿ ಅಭಿನಂದಿಸಿದ ಮರಾಠ ಜಗದ್ಗುರು ಶ್ರೀ ಮಂಜುನಾಥ ಭಾರತಿ ಸ್ವಾಮಿಜಿ ವಿವಿದ ಜನಪರ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಕಾಗೇರಿಯವರೊಂದಿಗೆ ಚರ್ಚಿಸಿದರು. . | Kannada Prabha

ಸಾರಾಂಶ

ಅಳ್ನಾವರ ಸ್ಟೇಷನ್‌ನಲ್ಲಿ ಎಲ್ಲ ರೈಲುಗಳು ನಿಲುಗಡೆಯಾದರೆ ಸರ್ವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

ಹಳಿಯಾಳ: ನೆರೆಯ ತಾಲೂಕು ಅಳ್ನಾವರ ನಿಲ್ದಾಣದಲ್ಲಿ ಎಲ್ಲ ಪ್ರಮುಖ ರೈಲುಗಳು ನಿಲುಗಡೆಯಾಗಬೇಕು ಎಂದು ಮಂಜುನಾಥ ಭಾರತಿ ಸ್ವಾಮೀಜಿ ಆಗ್ರಹಿಸಿದರು.

ಶುಕ್ರವಾರ ಹಳಿಯಾಳಕ್ಕೆ ಆಗಮಿಸಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಮರಾಠ ಭವನದ ತಮ್ಮ ಕುಟೀರದಲ್ಲಿ ಅಭಿನಂದಿಸಿದ ಜಗದ್ಗುರುಗಳು, ವಿವಿಧ ಜನಪರ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಕಾಗೇರಿಯವರೊಂದಿಗೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಕೇವಲ ಅತ್ಯಲ್ಪ ಅವಧಿಯಲ್ಲಿ ಸಂಸದರು ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸದರನ್ನು ಅಶೀರ್ವದಿಸಿದರು. ಅಳ್ನಾವರ ಸ್ಟೇಷನ್‌ನಲ್ಲಿ ಎಲ್ಲ ರೈಲುಗಳು ನಿಲುಗಡೆಯಾದರೆ ಸರ್ವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಈ ಕುರಿತು ರೈಲ್ವೆ ಸಚಿವರಿಗೂ ಮನವಿ ಸಲ್ಲಿಸಲಾಗಿದ್ದು, ತಾವು ಈ ಭಾಗದ ಜನತೆಯ ಈ ಕೋರಿಕೆಯ ಬಗ್ಗೆ ವಿಶೇಷವಾಗಿ ಗಮನಹರಿಸಬೇಕು. ಹಲವಾರು ವರ್ಷಗಳ ಈ ಬೇಡಿಕೆಗೆ ಸ್ಪಂದಿಸಬೇಕೆಂದರು.

ಮರಾಠಾ ಪರಿಷತ್ ತಾಲೂಕು ಅಧ್ಯಕ್ಷ ಚೂಡಪ್ಪ ಬೊಬಾಟೆ, ಮಾಜಿ ಜಿಲ್ಲಾಧ್ಯಕ್ಷ ಸಂದೀಪಕುಮಾರ ಬೊಬಾಟೆ, ಬಿಜೆಪಿ ಮಂಡಲ ಅಧ್ಯಕ್ಷ ವಿಠ್ಠಲ ಸಿದ್ದಣ್ಣನವರ, ಮುಖಂಡರಾದ ಮಂಗೇಶ ದೇಶಪಾಂಡೆ, ಶಿವಾಜಿ ನರಸಾನಿ, ಅನಿಲ ಮುತ್ನಾಳೆ, ಗಣಪತಿ ಕರಂಜೇಕರ, ಅಪ್ಪಾರಾವ ಪೂಜಾರಿ, ನಾಗರಾಜ ಶಹಾಪುರಕರ, ರಾಘವೇಂದ್ರ ಸಾಂಬ್ರೇಕರ, ಪ್ರವೀಣ ನಾಯ್ಕೋಜಿ, ಪುರಸಭಾ ಸದಸ್ಯ ಚಂದ್ರಕಾಂತ ಕಮ್ಮಾರ ಇತರರು ಇದ್ದರು.ಎಂಡೋಸಲ್ಫಾನ್ ಬಾಧಿತರ ಮರು ಸಮೀಕ್ಷೆ ಮಾಡಿ

ಕಾರವಾರ: ಭಟ್ಕಳ ಹೊರತುಪಡಿಸಿ ಉಳಿದ ಐದು ತಾಲೂಕುಗಳಲ್ಲಿ ಎಂಡೋಸಲ್ಫಾನ್ ಬಾಧಿತರ ಮರು ಸಮೀಕ್ಷೆ ಇದುವರೆಗೂ ಆಗಿಲ್ಲ. ಇದರಿಂದ ಹಲವಾರು ಜನ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಸೇರಲು ಸಾಧ್ಯವಾಗಿಲ್ಲ. ಸರ್ಕಾರದ ಸೌಲಭ್ಯಗಳನ್ನು ಅವರು ಪಡೆದುಕೊಳ್ಳಲು ಆಗುತ್ತಿಲ್ಲ ಎಂದು ಸ್ಕೋಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಡೇಶ ನಾಯ್ಕ ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಕನಿಷ್ಠ ೩ ತಿಂಗಳಿಗೊಮ್ಮೆ ಜಿಲ್ಲಾ ಎಂಡೋಸಲ್ಫಾನ್ ಬಾಧಿತರ ಕುಂದುಕೊರತೆಗಳ ಸಮಿತಿ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು. ಜಿಲ್ಲೆಯಲ್ಲಿ ಗೇರು ಅಭಿವೃದ್ಧಿ ನಿಗಮವು ಬಳಕೆಯಾಗದೇ ಇರುವ ಎಂಡೋಸಲ್ಫಾನ್ ಹಾಗೂ ಇತರ ಕ್ರಿಮಿನಾಶಕಗಳನ್ನು ಯಾವ ರೀತಿ ವಿಲೇವಾರಿ ಮಾಡಿದ್ದಾರೆ? ಎಲ್ಲೆಲ್ಲಿ ಹೂತಿದ್ದಾರೆ ಎಂಬ ಬಗ್ಗೆ ತನಿಖೆಗೆ ಆದೇಶಿಸಬೇಕು.ಜಿಲ್ಲೆಯ ಭಟ್ಕಳದಲ್ಲಿ ನಡೆಸಿದಂತೆ ಉಳಿದ ಐದೂ ತಾಲೂಕುಗಳಲ್ಲಿಯೂ ಎಂಡೋಸಲ್ಫಾನ್ ಬಾಧಿತರ ಮರು ಸಮೀಕ್ಷೆಗೆ ಕ್ರಮ ಕೈಗೊಳ್ಳಬೇಕು. ತಾಲೂಕುವಾರು ಎಂಡೋಸಲ್ಫಾನ್ ಬಾಧಿತರ ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕಾಗಿ ಇಲಾಖಾವಾರು ಗುರಿಯನ್ನು ನಿಗದಿಪಡಿಸಬೇಕು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಎಂಡೋಸಲ್ಫಾನ್ ಬಾಧಿತರ ಚಿಕಿತ್ಸೆಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡಂತೆ ಜಿಲ್ಲೆಯಲ್ಲಿಯೂ ಎಂಡೋಸಲ್ಫಾನ್ ಬಾಧಿತರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಬೇಕು ಅಥವಾ ಹಿಂದೆ ಇದ್ದ ಸುಸಜ್ಜಿತ ಫಿಸಿಯೋಥೆರಪಿ ಸಂಚಾರಿ ಆಸ್ಪತ್ರೆಯನ್ನು ಪುನರ್ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಎಂಡೋಸಲ್ಫಾನ್ ಬಾಧಿತರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದ್ದರೂ ಈವರೆಗೂ ಬಾಧಿತ ಕುಟುಂಬಗಳನ್ನು ಪುನರ್‌ವಸತಿಗೊಳಿಸುವ ಯಾವುದೇ ಮಹತ್ವದ ಕಾರ್ಯವಾಗಿಲ್ಲ. ಎಂಡೋ ಬಾಧಿತರ ಪುನರ್‌ವಸತಿ ಬಗ್ಗೆ ಆದ್ಯತೆಯ ಮೇರೆಗೆ ಯೋಜನೆಗಳನ್ನು ರೂಪಿಸಿ ಕೇರಳ ಮಾದರಿಯಲ್ಲಿ ಪುನರ್ ವಸತಿ ಕಲ್ಪಿಸಲಾಗುವುದು ಎಂದು ಸರ್ಕಾರಗಳು ಹೇಳುತ್ತಾ ಬಂದಿದೆಯಾದರೂ ಅವಶ್ಯಕತೆ, ಬೇಡಿಕೆಯನ್ನಾಧರಿಸಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಯಾವುದೇ ಕಾರ್ಯ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ, ಯೋಜನಾ ಸಂಯೋಜಕ ಪ್ರಜ್ಞಾಕುಮಾರ ಹೆಗ್ಗಡೆ ಇದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ