- ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕಾನೂನಿನ ಅರಿವು ಎಲ್ಲಾ ಮಹಿಳೆಯರಿಗೂ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶ ವಿ. ಹನುಮಂತಪ್ಪ ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ತಾಲೂಕು ಸ್ತ್ರೀ ಶಕ್ತಿ ಭವನದಲ್ಲಿ ಏರ್ಪಡಿಸಲಾಗಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕುಟುಂಬದ ಸದಸ್ಯರಿಂದಲೇ ಲೈಂಗಿಕ ಶೋಷಣೆಗೆ ಒಳಗಾಗುತ್ತಿದ್ದು, ಈ ಬಗ್ಗೆ ಕಾನೂನಿನ ಅರಿವು ಎಲ್ಲಾ ಮಹಿಳೆಯರಿಗೂ ಇರಬೇಕು. ಎಲ್ಲಾ ಮಹಿಳೆಯರು ಕೆಲಸ ಮಾಡುವ ಸ್ಥಳ ಸುರಕ್ಷಿತವಾಗಿದೆಯೇ ಇಲ್ಲವೇ ಎಂಬ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಅಂಗನವಾಡಿ ಕಾರ್ಯಕರ್ತೆಯರು ಲೈಂಗಿಕ ಶೋಷಣೆ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ. ಸಂತೋಷ್ ಮಾತನಾಡಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಕುರಿತು 2013 ರಲ್ಲಿ ಕಾಯ್ದೆ ಜಾರಿಗೊಂಡ ಹಿನ್ನಲೆ ಮತ್ತು 10 ಕ್ಕಿಂತ ಹೆಚ್ಚು ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಯಾಗಬೇಕು. 10 ಕ್ಕಿಂತ ಕಡಿಮೆ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ನಡೆದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾದ ಸ್ಥಳೀಯ ದೂರು ನಿವಾರಣಾ ಸಮಿತಿಗೆ ದೂರು ಸಲ್ಲಿಸ ಬಹುದು ಎಂದು ತಿಳಿಸಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ರಂಗನಾಥ್ ಮಾತನಾಡಿ, ಸಮುದಾಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಅರಿವು ಮೂಡಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಕುಟುಂಬ ಸದಸ್ಯರಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಸಖಿ ಓನ್ ಸ್ಟಾಪ್ ಸೆಂಟರ್‌ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ. ರೂಪಾಕುಮಾರಿ, ಹಿರಿಯ ಮೇಲ್ವಿಚಾರಕರಾದ ಸಿ.ಎಂ. ಲೀಲಾವತಿ, ಮೇಲ್ವಿಚಾರಕರಾದ ವಿಜಯಕುಮಾರಿ ಉಪಸ್ಥಿತರಿದ್ದರು. 7 ಕೆಸಿಕೆಎಂ 3ಚಿಕ್ಕಮಗಳೂರು ತಾಲೂಕು ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಮಹಿಳೆಯರ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮವನ್ನು ನ್ಯಾ. ವಿ. ಹನುಮಂತಪ್ಪ ಉದ್ಘಾಟಿಸಿದರು. ಸಂತೋಷ್, ಸಿ. ರಂಗನಾಥ್, ರೂಪಾಕುಮಾರಿ ಇದ್ದರು.