ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ನಾಯಕರ ಮಧ್ಯೆ ಕಿತ್ತಾಟ ನಡೆದಿದೆ ಎಂದು ತಿಳಿದುಬಂದಿದೆ.
ಅನೇಕ ಹಿರಿಯ ಮುಖಂಡರು ಮಧ್ಯೆ ಪ್ರವೇಶಿಸಿ ಸಮಾಧಾನ ಪಡಿಸಲು ಯತ್ನಿಸಿದ್ದರೂ ಕೆಲ ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದರು. ಏರುಧ್ವನಿಯಲ್ಲಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯ ಪ್ರಮುಖ ಕಾರ್ಯಕರ್ತರು, ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ಅಸಮಾಧಾನವಿಲ್ಲ. ಆದರೆ ಅಲ್ಪಸಂಖ್ಯಾತರನ್ನು ಕಡೆಗಣಿಸುವ ನಾಯಕರ ವಿರುದ್ಧ ನಮಗೆ ಅಸಮಾಧಾನವಿದೆ. ನಮ್ಮ ಸಂಖ್ಯಾಬಲಕ್ಕೆ ಸೂಕ್ತ ಮಾನ್ಯತೆ ದೊರಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದರು.ಅಡಕೆ ಆಮದು ವಿರುದ್ಧ ಸಂಸತ್‌ನಲ್ಲಿ ಧ್ವನಿ ಎತ್ತುವ ಕೆಲಸವಾಗಬೇಕು
ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನು ಹಿಂದೂ ಧರ್ಮದಲ್ಲಿ ಹುಟ್ಟಿದವ. ಹಿಂದೂ ಧರ್ಮದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡವನು ನಾನು. ಜೊತೆಗೆ ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ಆದರೆ ಎಲ್ಲಿಯೂ ಕೂಡ ಅಪಪ್ರಚಾರ, ಅಪನಂಬಿಕೆ ಬರುವ ಕೆಲಸ ಮಾಡಿಲ್ಲ. ಆದ್ದರಿಂದ ನಾವು ಯಾರನ್ನು ದ್ವೇಷಿಸುವ, ವಿರೋಧಿಸುವ ಕೆಲಸ ಮಾಡುವುದು ಬೇಡ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ತೆರಳಿ ಮತ ಕೇಳಿ ಎಂದರು.