ಕಾಮನ್‌ ಪುಟಕ್ಕೆ..ಹಣ ದುರ್ಬಳಕೆ ಆರೋಪ: ಪಿಡಿಒ ಅಮಾನತು

KannadaprabhaNewsNetwork |  
Published : Jan 10, 2024, 01:46 AM IST
53 | Kannada Prabha

ಸಾರಾಂಶ

ದೊಡ್ಡ ಕವಲಂದೆ ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಈ ಹಿಂದೆ ಕವಲಂದೆ ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಹಾಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮಕಂದೂರು ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುರುಷೋತ್ತಮ್ ಅಮಾನತ್ತುಗೊಳಗಾದವರು, ಇವರು ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಪಂಚಾಯತಿಯಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 26.25 ಲಕ್ಷ ರು. ಅನುದಾನವನ್ನು ಶೌಚಾಲಯ ನಿರ್ಮಾಣದ ಬದಲಾಗಿ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದು, ಜೊತೆಗೆ 2020-21 ಹಾಗೂ 2022-23ನೇ ಸಾಲಿನಲ್ಲಿ 8,73,796 ರು. ಗಳನ್ನು ನಿಯಮ ಬಾಹಿರವಾಗಿ ಪಂಚಾಯತಿ ಬಿಲ್ ಕಲೆಕ್ಟರ್ ಬ್ಯಾಂಕ್ ಖಾತೆಗೆ ವರ್ಗಾಯಿಸುವ ಮೂಲಕ ದುರುಪಯೋಗ ಪಡಿಸಿಕೊಂಡಿರುವುದು ಇಲಾಖಾ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ, ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮಡಿಕೇರಿ ತಾಲೂಕಿನ ಮಕಂದೂರು ಗ್ರಾಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುರುಷೋತ್ತಮ್ ಅವರನ್ನು ಅಮಾನತ್ತು ಪಡಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ