ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

KannadaprabhaNewsNetwork |  
Published : Nov 15, 2026, 02:15 AM IST
 | Kannada Prabha

ಸಾರಾಂಶ

ವಾಂಗಡದಲ್ಲಿರುವ ಹೇರ್ ಕಟಿಂಗ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾದ ಈತ, ಬಾಲಕಿ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಅಂಗಡಿಗೆ ತೆರಳಿದ್ದ ಸಂದರ್ಭದಲ್ಲಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರವಾರ: ಹೇರ್ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಕ್ಷೌರಿಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಘಟನೆ ತಾಲೂಕಿನ ವಾಂಗಡದಲ್ಲಿ ನಡೆದಿದೆ.ಉತ್ತರ ಪ್ರದೇಶ ಮೂಲದ ಸಂಶಾದ್ ಎಂಬಾತ ಈ ಆರೋಪ ಎದುರಿಸುತ್ತಿದ್ದಾನೆ. ಕಳೆದ ಒಂದು ವರ್ಷದಿಂದ ವಾಂಗಡದಲ್ಲಿರುವ ಹೇರ್ ಕಟಿಂಗ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾದ ಈತ, ಬಾಲಕಿ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಅಂಗಡಿಗೆ ತೆರಳಿದ್ದ ಸಂದರ್ಭದಲ್ಲಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪೋಷಕರ ದೂರಿನ ಆಧಾರದ ಮೇಲೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಸಂಶಾದ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

10 ವರ್ಷದ ಬಾಲಕಿಯ ಮೇಲಿನ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.ಆರೋಪಿ ಬಂಧನಕ್ಕೆ ಪೊಲೀಸರಿಗೆ ಆಗ್ರಹ

ಕಾರವಾರ: ಮಾಜಾಳಿಯಲ್ಲಿ ಹೇರ್ ಕಟಿಂಗ್ ಅಂಗಡಿಗೆ ತೆರಳಿದ್ದ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣದ ಆರೋಪಿಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಚಿತ್ತಾಕುಲ ಪೊಲೀಸ್ ಠಾಣೆಯ ಬಳಿ ಜಮಾಯಿಸಿ ಒತ್ತಾಯಿಸಿದ್ದಾರೆ.ಮಾಜಾಳಿ ಭಾಗದ ಹೇರ್ ಕಟಿಂಗ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಶಾದ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದೆ. ಕಳೆದ ಒಂದು ವರ್ಷದಿಂದ ಆತ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಬಾಲಕಿ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಅಂಗಡಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಚಿತ್ತಾಕುಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಘಟನೆ ಬೆಳಕಿಗೆ ಬರುತ್ತಿದ್ದಂತೆ ವಾಂಗಡ ಹಾಗೂ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆಯ ಬಳಿ ಸೇರಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಶೀಘ್ರ ಬಂಧಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದೇ ವೇಳೆ, ಪ್ರಕರಣದ ಸಮಗ್ರ ತನಿಖೆ ನಡೆಸಿ ಗ್ರಾಮದಲ್ಲಿರುವ ಹೊರರಾಜ್ಯದ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸುವಂತೆ ಸ್ಥಳೀಯರು ಶನಿವಾರ ಚಿತ್ತಾಕುಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.

ಕಳೆದ ಒಂದು ವರ್ಷದಿಂದ ಆತನಿಗೆ ಕೆಲಸ ನೀಡಿದ್ದ ಹೇರ್ ಕಟಿಂಗ್ ಅಂಗಡಿ ಮಾಲೀಕನ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಮಾಲೀಕನ ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಪರಿಶೀಲಿಸಿ, ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಗಡಿ ಗ್ರಾಮವಾದ ಮಾಜಾಳಿಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವ ಹೊರರಾಜ್ಯದ ಕಾರ್ಮಿಕರ ಆಧಾರ್, ಪಾನ್ ಕಾರ್ಡ್ ಹಾಗೂ ಪೊಲೀಸ್ ಪರಿಶೀಲನಾ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮಹಿಳಾ ಹಾಸ್ಟೆಲ್ ಮತ್ತು ಸರ್ಕಾರಿ ಬಿಇ ಕಾಲೇಜಿನ ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂದೂ ಸ್ಥಳೀಯರು ಮನವಿ ಮಾಡಿದ್ದಾರೆ.

ಮಾಜಾಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಹಾಸ ಕೋಠಾರಕರ, ರೋಹನ ವಿಷ್ಣು ನಾಯ್ಕ, ವಿನಾಯಕ ಸಾವಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ