ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ
ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕೊರೋನಾ ಸಂದರ್ಭದಲ್ಲಿ ನಾನು ತಪ್ಪೆಸಗಿದ್ದರೆ ಕ್ರಮ ಕೈಗೊಳ್ಳಬೇಕಿತ್ತು. ಇದು ರಾಜಕೀಯ ಅಪಪ್ರಚಾರವಾಗಿದ್ದು, ಇದಕ್ಕೆ ನಾನೆಂದೂ ಅಂಜುವುದಿಲ್ಲ ಎಂದರು.
ಪಾಪದ ಕೆಲಸ ಮಾಡಿಲ್ಲ: ನಾನು ಆರೋಗ್ಯ ಸಚಿವನಾಗಿದ ಅವಧಿಯಲ್ಲಿ ತಂದ ಯೋಜನೆಗಳನ್ನು ಈಗಿನ ಸರ್ಕಾರ ಮುಂದುವರಿಸಿದೆ. ಡಯಾಲಿಸಿಸ್ ಸೈಕಲ್ ದುಪ್ಪಟ್ಟು, ನಮ್ಮ ಕ್ಲಿನಿಕ್, ನೇತ್ರ ಚಿಕಿತ್ಸೆ ಮೊದಲಾದ ಯೋಜನೆಗಳನ್ನು ಈಗಿನ ಸರ್ಕಾರ ಮುಂದುವರಿಸಿದೆ. ಪ್ರತಿ ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಲಾಗಿದೆ. ನಾನು ಆರೋಗ್ಯ ಸಚಿವನಾಗಿ ಕೆಲಸ ಮಾಡಿದ್ದಕ್ಕೆ ತೃಪ್ತಿ ಇದೆ. ಯಾರಿಗಾದರೂ ಅನುಮಾನವಿದ್ದರೆ ರಸ್ತೆಯಲ್ಲಿ ಫಲಕ ಹಿಡಿಯದೆ ತನಿಖೆ ನಡೆಸುವ ಸಂಸ್ಥೆಗೆ ನೀಡಲಿ ನನ್ನ ತಪ್ಪಿದ್ದರೆ ಶಿಕ್ಷೆ ಎದುರಿಸುತ್ತೇನೆ. ನಾನು ಅಂತಹ ಪಾಪದ ಕೆಲಸ ಮಾಡಿಲ್ಲ ಎಂದು ಹೇಳಿದರು.ಉತ್ತಮ ವಾತಾವರಣವಿದೆ:
ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಮುಂದೆ ಬೇರೆಯವರಿಗೂ ಅವಕಾಶ ಸಿಗಬಹುದು. ಯಾರೂ ಭಿನ್ನವಾಗಿ ಮಾತನಾಡದೆ ಮೋದಿಯವರನ್ನು ಗೆಲ್ಲಿಸೋಣ. ತಮ್ಮೆಲ್ಲರ ಸಹಕಾರ ಮುಖ್ಯ ಎಂದರು.
ಜೆಡಿಎಸ್ ಸಹಕಾರ ನೀಡಲಿದೆ:ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ನಮ್ಮ ಪಕ್ಷದ ಹಿರಿಯ ನಾಯಕರು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರ ನಿರ್ದೇಶನದಂತೆ ನಮ್ಮ ಪಕ್ಷದ ಮುಖಂಡರೆಲ್ಲರೂ ಮೈತ್ರಿ ಅಭ್ಯರ್ಥಿ ಡಾ.ಸುಧಾಕರ್ ಅವರಿಗೆ ಸಹಕಾರ ನೀಡಿ ಗೆಲ್ಲಿಸಿಲು ಶ್ರಮ ವಹಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಮುಖಂಡರಾದ ಸಪ್ತಗಿರಿ ಶಂಕರ್ ನಾಯಕ್, ಹೊನ್ನೇನಹಳ್ಳಿ ರುದ್ರಣ್ಣ ಮತ್ತೀತ್ತರಿದ್ದರು.