ರೈಲ್ವೆ ಭೂಸ್ವಾಧೀನ ಪರಿಹಾರದಲ್ಲಿ ಅಕ್ರಮ ಆರೋಪ

KannadaprabhaNewsNetwork |  
Published : Sep 17, 2026, 01:45 AM IST
15ಎಚ್ಎಸ್ಎನ್10 :  | Kannada Prabha

ಸಾರಾಂಶ

ಎಸ್‌ಎಲ್‌ಒ ಕಚೇರಿಯಲ್ಲಿ ರೈಲ್ವೆಗೆ ಸಂಬಂಧಿಸದ ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಂದ ಕಚೇರಿ ಸಮಯದ ನಂತರವೂ, ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ರಜೆ ದಿನಗಳಲ್ಲಿಯೂ ಕಾನೂನುಬಾಹಿರವಾಗಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು. ಕೀರ್ತಿಕುಮಾರ್ ಯು.ಆರ್. ಸೇರಿದಂತೆ ಬೇರೆ ನಿಗಮದ ಸಿಬ್ಬಂದಿ, ಚಿನ್ಮಯಿ ಎಂಬ ರೈಲ್ವೆ ನೌಕರರು ಹಾಗೂ ಹೊರಗುತ್ತಿಗೆದಾರರಾದ ನಯನ ಅವರಿಂದ ರೈಲ್ವೆ ಸಂಬಂಧಿತ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೂ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಕನ್ನಡಪ್ರಭ ವಾರ್ತೆ ಹಾಸನ

ಚಿಕ್ಕಮಗಳೂರು- ಸಕಲೇಶಪುರ ರೈಲ್ವೆ ಭೂಸ್ವಾಧೀನ ಪರಿಹಾರದ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ನಿಯಮ ಉಲ್ಲಂಘನೆ ಹಾಗೂ ಭ್ರಷ್ಟಾಚಾರದ ಆರೋಪ ಮಾಡಿರುವ ಎಸ್. ಬೊಮ್ಮಡೀಹಳ್ಳಿ ಗ್ರಾಮದ ರೋಹಿತ್ ಬಿ.ಆರ್. ಸಂಬಂಧಪಟ್ಟ ಎಸ್‌ಎಲ್‌ಒ ಮಂಜುನಾಥ್ (ಎಚ್‌ಆರ್‌ಪಿ) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಲೂರು ತಾಲೂಕಿನ ಎಸ್. ಬೊಮ್ಮಡೀಹಳ್ಳಿ ಗ್ರಾಮದ ಸರ್ವೇ ನಂ.೧೨೮/೩ರ ೦.೦೭.೦೮ ಗುಂಟೆ ಹಾಗೂ ಸರ್ವೇ ನಂ.೧೨೮/೫ರ ೦.೧೫ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ವಾದಿ ಮತ್ತು ಪ್ರತಿವಾದಿಗಳನ್ನು ಕರೆಸಿ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಸರ್ವೇ ನಂ.೧೨೯/೨ರ ೦.೨೨.೦೮ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ವಾದಿಗೆ ಮಾಹಿತಿ ನೀಡದೆ ಪ್ರತಿವಾದಿಯ ಪರವಾಗಿ ಪರಿಹಾರದ ಹಣ ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಸರ್ವೇ ನಂ.೧೨೯/೧ರ ೦.೨೨.೦೮ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ವಾದಿ ಮತ್ತು ಪ್ರತಿವಾದಿ ಇಬ್ಬರನ್ನೂ ವಿಚಾರಣೆಗೆ ಕರೆಸಲಾಗಿತ್ತು. ಈ ಸಂಬಂಧ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಸಂಖ್ಯೆ ೪೯೨/೨೦೨೩ ದಾಖಲಾಗಿರುವ ಹಿನ್ನೆಲೆಯಲ್ಲಿ ವಿವಾದವನ್ನು ನ್ಯಾಯಾಲಯದಲ್ಲಿಯೇ ಇತ್ಯರ್ಥಪಡಿಸಿಕೊಳ್ಳುವಂತೆ ತಿಳಿಸಿ, ಅಂತಿಮ ನ್ಯಾಯಾಲಯದ ಆದೇಶಕ್ಕೆ ಕಾಯ್ದಿರಿಸಲಾಗಿದೆ ಎಂದು ಆದೇಶಿಸಲಾಗಿದೆ. ಆದರೂ ಇದೀಗ ಮತ್ತೆ ವಾದಿಗೆ ಯಾವುದೇ ಮಾಹಿತಿ ನೀಡದೆ ಪ್ರತಿವಾದಿಗೆ ಪರಿಹಾರದ ಹಣ ಬಿಡುಗಡೆ ಮಾಡಲು ಮುಂದಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು. ಈ ಕುರಿತು ಎಸ್‌ಎಲ್‌ಒ ಮಂಜುನಾಥ್ ಅವರನ್ನು ಪ್ರಶ್ನಿಸಿದಾಗ, ಹಣ ಬಿಡುಗಡೆ ಮಾಡುವುದಾಗಿ ಹೇಳಿ, ಮಾಧ್ಯಮದವರ ಬಳಿಗೆ ಅಥವಾ ಮೇಲಾಧಿಕಾರಿಗಳ ಬಳಿಗೆ ಬೇಕಾದರೂ ಹೋಗುವಂತೆ ಉಡಾಫೆಯಾಗಿ ಮಾತನಾಡಿದ್ದಾರೆ ಎಂದು ರೋಹಿತ್ ಆರೋಪಿಸಿದರು. ತಕರಾರು ಪ್ರಕರಣಗಳಲ್ಲಿ ಹೆಚ್ಚಿನ ಹಣ ನೀಡುವವರ ಪರವಾಗಿ ಆದೇಶಗಳನ್ನು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.ಎಸ್‌ಎಲ್‌ಒ ಕಚೇರಿಯಲ್ಲಿ ರೈಲ್ವೆಗೆ ಸಂಬಂಧಿಸದ ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಂದ ಕಚೇರಿ ಸಮಯದ ನಂತರವೂ, ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ರಜೆ ದಿನಗಳಲ್ಲಿಯೂ ಕಾನೂನುಬಾಹಿರವಾಗಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು. ಕೀರ್ತಿಕುಮಾರ್ ಯು.ಆರ್. ಸೇರಿದಂತೆ ಬೇರೆ ನಿಗಮದ ಸಿಬ್ಬಂದಿ, ಚಿನ್ಮಯಿ ಎಂಬ ರೈಲ್ವೆ ನೌಕರರು ಹಾಗೂ ಹೊರಗುತ್ತಿಗೆದಾರರಾದ ನಯನ ಅವರಿಂದ ರೈಲ್ವೆ ಸಂಬಂಧಿತ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೂ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಸರ್ವೆ ನಂ.೧೨೯/೧ಕ್ಕೆ ಸಂಬಂಧಿಸಿದ ರೈಲ್ವೆ ಪರಿಹಾರದ ಮೊತ್ತವನ್ನು ನ್ಯಾಯಾಲಯದ ವಿಚಾರಣೆ ಪೂರ್ಣಗೊಳ್ಳುವವರೆಗೆ ಬಿಡುಗಡೆ ಮಾಡಬಾರದು ಎಂದು ತಾವು ಖುದ್ದಾಗಿ ಎಸ್‌ಎಲ್‌ಒ ಮಂಜುನಾಥ್ ಅವರಿಗೆ ಮನವಿ ಮಾಡಿದ್ದರೂ, ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರಿಗೆ ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ಹೇಳಿದಾಗ ತಮ್ಮ ವಿರುದ್ಧ ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಬೆದರಿಕೆ ಧಾಟಿಯಲ್ಲಿ ಮಾತನಾಡಿದ್ದಾರೆ ಎಂದು ರೋಹಿತ್ ಆರೋಪಿಸಿದರು.ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸತ್ಯಾಸತ್ಯತೆ ಬಹಿರಂಗಪಡಿಸಬೇಕು. ನಿಯಮ ಉಲ್ಲಂಘನೆ ಅಥವಾ ಅಕ್ರಮ ನಡೆದಿರುವುದು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ್, ಸುಬ್ರಮಣ್ಯ, ಮುರುಳಿ ಇತರರು ಉಪಸ್ಥಿತರಿದ್ದರು.------

ಫೋಟೋ

ಪತ್ರಿಕಾಗೋಷ್ಠಿಯಲ್ಲಿ ಬೊಮ್ಮಡೀಹಳ್ಳಿ ಗ್ರಾಮದ ರೋಹಿತ್ ಬಿ.ಆರ್. ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ್, ಸುಬ್ರಮಣ್ಯ, ಮುರುಳಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ವಿಶ್ವಕರ್ಮ ಮಹೋತ್ಸವ ಆಚರಣೆಗೆ ಸಿದ್ಧತೆ
ಮತಗಟ್ಟೆಯಲ್ಲಿನ ಲೋಪದೋಷ ಸರಿಪಡಿಸಲು ಒತ್ತಾಯ