ಎಲ್ಲಮ್ಮ ದೇಗುಲ ಪ್ರವೇಶಕ್ಕೆ ಅಡ್ಡಿ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Aug 19, 2026, 01:15 AM IST
18ಕೆಆರ್ ಎಂಎನ್ 6.ಜೆಪಿಜಿಫೋಟೋ  | Kannada Prabha

ಸಾರಾಂಶ

ಹಾರೋಹಳ್ಳಿ: ತಾಲೂಕಿನ ಸಂಜೀವನಾಯಕನದೊಡ್ಡಿ ಗ್ರಾಮದಲ್ಲಿರುವ ಎಲ್ಲಮ್ಮ ದೇವಸ್ಥಾನಕ್ಕೆ ಪ್ರವೇಶ ನೀಡದೆ, ಧಾರ್ಮಿಕ ಪೂಜಾ ಕಾರ್ಯಗಳಿಗೆ ಅಡ್ಡಿ ಪಡಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿ ಎಸ್.ವಿ.ಮಂಗಳಾ ಆರೋಪಿಸಿದ್ದಾರೆ

ಹಾರೋಹಳ್ಳಿ: ತಾಲೂಕಿನ ಸಂಜೀವನಾಯಕನದೊಡ್ಡಿ ಗ್ರಾಮದಲ್ಲಿರುವ ಎಲ್ಲಮ್ಮ ದೇವಸ್ಥಾನಕ್ಕೆ ಪ್ರವೇಶ ನೀಡದೆ, ಧಾರ್ಮಿಕ ಪೂಜಾ ಕಾರ್ಯಗಳಿಗೆ ಅಡ್ಡಿ ಪಡಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿ ಎಸ್.ವಿ.ಮಂಗಳಾ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ದೇವಸ್ಥಾನದ ಸ್ಥಳ ನಮ್ಮ ವಂಶಸ್ಥರಿಗೆ ಸೇರಿದೆ. ಗ್ರಾಮದ ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಾಗ ಕಬಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಗವನ್ನು ನಮ್ಮ ಸುಪರ್ದಿಗೆ ಬಿಟ್ಟುಕೊಡುವಂತೆ ಕೇಳಲು ನಮ್ಮ ಮೇಲೆ ದೌರ್ಜನ್ಯವೆಸಗಲು ಮಾಡಲು ಮುಂದಾಗುತ್ತಿದ್ದಾರೆ. ಆದ್ದರಿಂದ

ದೇವಸ್ಥಾನಕ್ಕೆ ಬೀಗ ಹಾಕಿದ್ದೇವೆ. ತಮ್ಮ ಗಮನಕ್ಕೂ ತರದೆ ಬೀಗವನ್ನು ಒಡೆದಿದ್ದಾರೆಂದು ಆರಕ್ಷಕ ಸಿಬ್ಬಂದಿಗೆ ದೂರು ನೀಡಿದ್ದರೂ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮಕ್ಕ ನಮ್ಮ ಅಜ್ಜಿ. ಅವರಿಗೆ ಗಂಡು ಮಕ್ಕಳಿಲ್ಲದ ಕಾರಣ ಮೊಮ್ಮಕ್ಕಳಾದ ನಮ್ಮನ್ನೇ ಮಕ್ಕಳಂತೆ ಸಾಕಿದ್ದಾರೆ. ರಾಮಕ್ಕನವರಿಗೆ ಸೇರಿದ ಜಮೀನಿನಲ್ಲಿ ಎಲ್ಲಮ್ಮ ದೇವಸ್ಥಾನ ನಿರ್ಮಿಸಲಾಗಿದೆ. ದೇವಸ್ಥಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಜಾಗದ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ವಾಸ್ತವಾಂಶ ಬಹಿರಂಗಪಡಿಸಬೇಕು. ಕಾನೂನು ಕ್ರಮ ಕೈಗೊಂಡು ಗೊಂದಲಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಂಗಳಾ ಆಗ್ರಹಿಸಿದರು.

ದೇವಸ್ಥಾನದ ಜಾಗದ ಮಾಲೀಕತ್ವ ಹಾಗೂ ಬೀಗ ಒಡೆದಿರುವ ಘಟನೆ ಕುರಿತು ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಸಹ ಒತ್ತಾಯಿಸಿದ್ದಾರೆ.18ಕೆಆರ್ ಎಂಎನ್ 6.ಜೆಪಿಜಿ

ಹಾರೋಹಳ್ಳಿ ತಾಲೂಕಿನ ಸಂಜೀವನಾಯಕನದೊಡ್ಡಿ ಗ್ರಾಮದಲ್ಲಿರುವ ಎಲ್ಲಮ್ಮ ದೇವಸ್ಥಾನಕ್ಕೆ ಪ್ರವೇಶದ ಗೊಂದಲ ವಿಚಾರದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಮನವೊಲಿಸುತ್ತಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಕವೀರರಾಗದೆ ಕೌಶಲ್ಯವಂತರಾಗಿ ಬೆಳವಣಿಗೆ ಸಾಧಿಸಿ: ಪ್ರೊ.ಕೆ.ಶಿವಚಿತ್ತಪ್ಪ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ