ಎಸ್‌ಐಆರ್‌ನಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಆರೋಪ

KannadaprabhaNewsNetwork |  
Published : May 31, 2026, 01:45 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ತೀವ್ರತೆ ಪರೀಕ್ಷರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ ಎಂದು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ಆರೋಪಿಸಿದ್ದು, ಶನಿವಾರ ಭದ್ರಾವತಿಯಲ್ಲಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ ಎಂದು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ಆರೋಪಿಸಿದ್ದು, ಶನಿವಾರ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ ಎಂದು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ಆರೋಪಿಸಿದ್ದು, ಶನಿವಾರ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಪ್ರಜಾಪ್ರಭುತ್ವ ದೇಶದಲ್ಲಿ ಮತದಾನದ ಹಕ್ಕು ಬಹಳ ಮಹತ್ವ ಪಡೆದುಕೊಂಡಿವೆ. ಮತದಾನದ ಹಕ್ಕು ಇರುವ ಕಾರಣಕ್ಕಾಗಿ ರಾಜಕಾರಣಿಗಳು (ಜನಪ್ರತಿನಿಧಿಗಳು) ದೇಶದ ನಾಗರಿಕರಿಗೆ ಕನಿಷ್ಠ ಗೌರವ ಕೊಡುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಎಸ್‌ಐಆರ್ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ. ಅಂದರೆ ತನ್ನ ಮತಬ್ಯಾಂಕ್ ಅಲ್ಲದ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಅಲೆಮಾರಿಗಳು ಇನ್ನಿತರ ಅಲಕ್ಷಿತ ಸಮುದಾಯಗಳನ್ನು ಮತದಾರರ ಪಟ್ಟಿಯಿಂದ ಹೊರಹಾಕುವುದಕ್ಕಾಗಿ ಈ ಹುನ್ನಾರ ನಡೆಸಿದೆ. ಈ ಅವೈಜ್ಞಾನಿಕ ಜನವಿರೋಧಿ ನಡೆಯನ್ನು ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ತೀವ್ರವಾಗಿ ಖಂಡಿಸುತ್ತದೆ ಎಂದು ಸಂಚಾಲಕ ಪಿ. ಮೂರ್ತಿ ಹೇಳಿದರು.

ದೇಶದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್ ಇಲ್ಲದೆ ಇರುವಂತಹ ಅಲ್ಪಸಂಖ್ಯಾತರು, ಆದಿವಾಸಿಗಳು, ಅಲೆಮಾರಿಗಳು, ಬಡವರು, ದಲಿತರು, ವಿವಾಹಿತ ಮಹಿಳೆಯರು ದೇಶದಲ್ಲಿ ಇನ್ನೂ ಕೋಟ್ಯಾಂತರ ಜನರು ಇದ್ದಾರೆ. ಇಂತಹ ಪರಿಸ್ಥಿಯಲ್ಲಿ ಎಸ್‌ಐಆರ್‌ನಲ್ಲಿ ಮತದಾನದ ಹಕ್ಕನ್ನು ಪಡೆಯಲು ೧೧ ದಾಖಲೆಗಳನ್ನು ಕೊಡಬೇಕಾಗಿದೆ. ಯಾವುದೇ ಅಕ್ಷರ, ದಿನಾಂಕ, ಅಪ್ಪ-ಅಮ್ಮನ ಹೆಸರು ಸೇರಿದಂತೆ ಯಾವುದೇ ತಪ್ಪುಗಳಿಲ್ಲದೆ ಪೂರ್ಣ ಪ್ರಮಾಣದಲ್ಲಿ ಸರಿಯಾಗಿರುವ ದಾಖಲೆಗಳನ್ನು ಒದಗಿಸಲು ಹೇಗೆ ಸಾಧ್ಯ. ದೇಶದಲ್ಲಿ ಇದುವರೆಗೂ ೧೩ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದು, ಪಶ್ಚಿಮ ಬಂಗಾಳದಲ್ಲಿ ೯೨ ಲಕ್ಷ, ಉತ್ತರ ಪ್ರದೇಶದಲ್ಲಿ ೨.೩ ಕೋಟಿ, ಬಿಹಾರದಲ್ಲಿ ೬೭ ಲಕ್ಷ ಜನರು ಸೇರಿದಂತೆ ಒಟ್ಟು ೬ ಕೋಟಿ ಜನರು ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಉಳಿದ ರಾಜ್ಯಗಳಿಂದ ಇನ್ನೂ ಆರು ಕೋಟಿ ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ ಎಂದು ಊಹಿಸಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಿಹಾರ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮತದಾನದ ಹಕ್ಕನ್ನು ಕಳೆದುಕೊಂಡವರಿಗೆ ಸರ್ಕಾರಿ ಸೌಲಭ್ಯಗಳನ್ನು ತಡೆಹಿಡಿಯಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ ಮತದಾರರು ಸರ್ಕಾರವನ್ನು ಆಯ್ಕೆ ಮಾಡುತ್ತಿದ್ದರು. ಈಗ ಎಸ್‌ಐಆರ್ ಜಾರಿ ಮೂಲಕ ಸರ್ಕಾರ ಮತದಾರರನ್ನು ಆಯ್ಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್ ಪ್ರಕ್ರಿಯೆಗೆ ಬೇಕಾದ ದಾಖಲೆಗಳಿಲ್ಲದ ಮಹಿಳೆಯರು, ಆದಿವಾಸಿಗಳು, ಅಲೆಮಾರಿಗಳು, ಬಡವರು ಮತ್ತು ಅಲ್ಪಸಂಖ್ಯಾತರನ್ನು ೨ನೇ ದರ್ಜೆಯ ಪ್ರಜೆಗಳನ್ನಾಗಿ ಮಾಡುವ ಹಾಗೂ ಸಂವಿಧಾನದ ಆಶಯವಾದ ೧೮ ವರ್ಷ ಪೂರ್ಣಗೊಂಡ ಭಾರತೀಯರೆಲ್ಲರಿಗೂ ಮತದಾನ ಮಾಡುವ ಹಕ್ಕನ್ನು ನಿರಾಕರಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ತಕ್ಷಣ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುಬಿಡಿಟಿ ವ್ಯಕ್ತಿತ್ವ ವಿಕಸನದ ಗುರುಕುಲ: ಬಿ.ಎಲ್.ಸಂತೋಷ್
ಬಿತ್ತನೆಬೀಜ, ರಸಗೊಬ್ಬರಕ್ಕೆ ಕೊರತೆ ಆಗದಿರಲಿ