ಧಾರವಾಡ: ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಜೇಷನ್ (ಎಐಡಿವೈಒ) ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಹಿಂದೆ ಅದೇ ಪ್ರದೇಶದಲ್ಲಿ ಅನನ್ಯ ಭಟ್, ಸೌಜನ್ಯ ಸೇರಿದಂತೆ ಹಲವು ಹೆಣ್ಣು ಮಕ್ಕಳ ಸಾವಿನ ಪ್ರಕರಣದ ತನಿಖೆಯಲ್ಲಿ ಅಪರಾಧಿಗಳು ಯಾರೆಂದು ಹೊರಗೆ ಬರಲೇ ಇಲ್ಲ. ಆದ್ದರಿಂದ ಈಗ ನಡೆಯುತ್ತಿರುವ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಹಾಗೂ ಯಾವುದೇ ರೀತಿಯ ಉನ್ನತ ಸ್ಥಾನದಲ್ಲಿದ್ದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿ ಪತ್ರದ ಮೂಲಕ ಅಗ್ರಹಿಸಲಾಯಿತು.
ಎಐಡಿವೈಓ ಜಿಲ್ಲಾಧ್ಯಕ್ಷ ಭವಾನಿ ಶಂಕರ್ ಗೌಡ, ಪ್ರೀತಿ ಸಿಂಗಾಡೆ, ಪ್ರತಾಪ್ ಸಿಂಗ್ ಜಾದವ್, ಮಲಿಕ್, ಪ್ರಿಯಾ, ಬಾಗು ಇತರರು ಇದ್ದರು.