ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಯಲ್ಲಿ ಜೆಡಿಎಸ್‌ನ ಎಲ್ಲಾ ಕಾರ್ಯಕರ್ತರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿಯಾಗಲಿದೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
ತ್ಯಾಮಗೊಂಡ್ಲು ಹೋಬಳಿಯ ಜೆಡಿಎಸ್ ಮುಖಂಡರ ಮನೆಮನೆಗೆ ಭೇಟಿ ನೀಡಿ ಮೈತ್ರಿ ಅಭ್ಯರ್ಥಿ ಗೆಲವಿಗೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವಂತೆ ಕೋರಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಈ ಬಾರಿಯೂ ಅಧಿಕ ಮತಗಳ ಅಂತರದಿಂದ ಎನ್‌ಡಿಎ ಅಭ್ಯರ್ಥಿ ಜಯಶೀಲರಾಗುತ್ತಾರೆ. ಯಾರಿಗೆ ಟಿಕೆಟ್ ನೀಡಿದರೂ ಪಕ್ಷದ ಗೆಲುವಿಗೆ ಎರಡು ಪಟ್ಟು ಹೆಚ್ಚು ಶ್ರಮಿಸುತ್ತೇವೆ ಎಂದು ಹೇಳಿದರು.ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿ, ತಾಲೂಕಿನ ಎಲ್ಲಾ ಜೆಡಿಎಸ್ ಮುಖಂಡರು ಒಮ್ಮತದಿಂದ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಕೇಂದ್ರದಲ್ಲಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಗಳ್ನಾಗಿಸಲು ನಾವೆಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿಗೆ ಗೆಲವು ಖಚಿತವೆಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಡಿ.ಸಿ.ವೇಣುಗೋಪಾಲ್ ಮಾತನಾಡಿ, ಬಿಜೆಪಿಯೂ ಜನಪರ ಯೋಜನೆಗಳ ರೂವಾರಿಯಾಗಿದೆ. ಯುವ ಜನತೆಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಈ ಬಾರಿಯೂ ನಮ್ಮ ಕ್ಷೇತ್ರಕ್ಕೆ ಯುವಕರನ್ನು ಅಭ್ಯರ್ಥಿಯನ್ನಾಗಿಸಬೇಕು, ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಂದ ಬಿಜೆಪಿ ಗೆಲುವಿಗೆ ಬೆಂಬಲ ಸೂಚಿಸಿದ್ದೇವೆ. ವಿಶ್ವನಾಥ್ ಅವರು ನಮ್ಮ ತಂದೆಯವರ ಕಾಲದಿಂದ ಪರಿಚಯ ಉತ್ತಮ ರಾಜಕೀಯ ಪಟುವಾಗಿದ್ದಾರೆ ಮಗನೂ ಸಹ ರಾಜಕೀಯದಲ್ಲಿ ಅತ್ಯುನ್ನತ ಸ್ಥಾನಕ್ಕೆ ಬರಲಿ ಎಂದು ಆಶಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ವಿ.ನಾಗರಾಜು, ಸಪ್ತಗಿರಿ ಶಂಕರ್ ನಾಯಕ್, ರಾಮಕೃಷ್ಣಪ್ಪ, ತಾಲೂಕು ಚುನಾವಣೆ ಸಂಚಾಲಕ ಕೋಡಿಗೇಹಳ್ಳಿ ಮಂಜುನಾಥ್, ಹೋಬಳಿ ಅಧ್ಯಕ್ಷ ಗಿರೀಶ್, ಗ್ರಾಪಂ ಅಧ್ಯಕ್ಷ ರಾಹುಲ್ ಗೌಡ, ಹರ್ಷ, ಬಳ್ಳಗೆರೆ ಮುಖಂಡರಾದ ರಾಜಣ್ಣ, ಚನ್ನೇಗೌಡ, ರಾಜಣ್ಣ, ವಿಎಸ್‌ಎಸ್‌ಎನ್ ನಿರ್ದೇಶಕ ಪ್ರಕಾಶ್, ಬೂತ್ ಅಧ್ಯಕ್ಷ ರಾಜಣ್ಣ, ವೇಣು, ಲಕ್ಷ್ಮೀಶ್, ಎಂಜಿನಿಯರ್ ಕಾಲೇಜಿನ ಸಿಇಒ ರಾಹುಲ್, ಸಿದ್ದರಾಜು, ಮೋಹನ್ ಕುಮಾರ್, ಮುರಳೀಧರ್ ಸೇರಿದಂತೆ ಹೋಬಳಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಇತರರಿದ್ದರು.
ಪೋಟೋ 3 :ತ್ಯಾಮಗೊಂಡ್ಲು ಹೋಬಳಿಯ ಜೆಡಿಎಸ್ ಮುಖಂಡರಾದ ಜಿಪಂ ಮಾಜಿ ಸದಸ್ಯ ಡಿ.ಸಿ.ವೇಣುಗೋಪಾಲ್ ಅವರ ಮನೆಗೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿ ಮೈತ್ರಿ ಅಭ್ಯರ್ಥಿ ಗೆಲವಿಗೆ ಬೆಂಬಲ ನೀಡುವಂತೆ ಕೋರಿದರು.