ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಬಾಲಕಿಗೆ ಅಲಯನ್ಸ್ ಸಂಸ್ಥೆಯಿಂದ ಆರ್ಥಿಕ ಸಹಾಯAlliance provides financial assistance to girl suffering from cancer

KannadaprabhaNewsNetwork |  
Published : Nov 06, 2025, 01:45 AM IST
5ಕೆಎಂಎನ್ ಡಿ18 | Kannada Prabha

ಸಾರಾಂಶ

ಪ್ರಸಕ್ತ ಸಾಲಿನಲ್ಲಿ ಸಂಸ್ಥೆ ಸೇವಾ ಕಾರ್ಯದ ಚಟುವಟಿಕೆ ಅಂಗವಾಗಿ ಪ್ರಥಮ ಆದ್ಯತೆ ಮೇರೆಗೆ ಐದು ಮಂದಿ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಂಸ್ಥೆ ಪದಾಧಿಕಾರಿಗಳ ಸಹಕಾರದೊಂದಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಮಕ್ಕಳಿಗೆ ಊಟ, ಬಟ್ಟೆ, ಹೊದಿಕೆಯೊಂದಿಗೆ ಆರ್ಥಿಕ ಸಹಾಯವನ್ನು ನೀಡಲಾಗಿದೆ .

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ತಗ್ಗಹಳ್ಳಿಯಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿಗೆ ಸಂಸ್ಕೃತಿ ಅಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ಸಹಾಯ ನೀಡಲಾಯಿತು.

ಅಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಎಚ್.ಮಾದೇಗೌಡ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೂಳೆ ಕ್ಯಾನ್ಸರ್ ಗೆ ತುತ್ತಾಗಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಗ್ಗಹಳ್ಳಿ ಪುಟ್ಟರಾಜು ಪುತ್ರಿ ಯಶಿಕಾ ಚಿಕಿತ್ಸೆಗೆ ಅಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ಸಹಾಯ ನೀಡಿ, ಮಾತನಾಡಿದ ಸಂಸ್ಥೆ ಅಧ್ಯಕ್ಷ ಡಿ.ಕೆ.ಪ್ರಭಾಕರ್, ಪ್ರಸಕ್ತ ಸಾಲಿನಲ್ಲಿ ಸಂಸ್ಥೆ ಸೇವಾ ಕಾರ್ಯದ ಚಟುವಟಿಕೆ ಅಂಗವಾಗಿ ಪ್ರಥಮ ಆದ್ಯತೆ ಮೇರೆಗೆ ಐದು ಮಂದಿ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಂಸ್ಥೆ ಪದಾಧಿಕಾರಿಗಳ ಸಹಕಾರದೊಂದಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಮಕ್ಕಳಿಗೆ ಊಟ, ಬಟ್ಟೆ, ಹೊದಿಕೆಯೊಂದಿಗೆ ಆರ್ಥಿಕ ಸಹಾಯವನ್ನು ನೀಡಲಾಗಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಸಂಪುಟ ಕಾರ್ಯದರ್ಶಿ ಆರ್.ಮಹೇಶ್, ವಲಯಾಧ್ಯಕ್ಷ ಸುರೇಶ್, ಖಜಾಂಚಿ ಅರುಣ್ ರಾಜ್, ಕಾರ್ಯದರ್ಶಿ ಅಭಿಲಾಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ