ಆರೋಗ್ಯ ಸೇವೆಗೆ ಹೆಚ್ಚಿನ ಅನುದಾನ ನೀಡಲಿ: ಶಾಸಕ ಬಾಲಕೃಷ್ಣ

KannadaprabhaNewsNetwork |  
Published : Nov 23, 2026, 01:45 AM IST
22ಎಚ್ಎಸ್ಎನ್4 : ಬಾಗೂರು  ಹೋಬಳಿಯ  ಬಿ ಹೊನ್ನೇನಹಳ್ಳಿ     ಗ್ರಾಮದಲ್ಲಿ  ಆರೋಗ್ಯ ಇಲಾಖೆಯ  ಆಯುಷ್ಮಾನ್ ಸ್ವಾಸ್ಥ್ ಯೋಜನೆ  ವತಿಯಿಂದ  ಸುಮಾರು 65 ಲಕ್ಷ ವೆಚ್ಚದಲ್ಲಿ  ನೂತನ ಆರೋಗ್ಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಸಿಎನ್ ಬಾಲಕೃಷ್ಣ  ಭೂಮಿ ಪೂಜೆ ನೆರವೇರಿಸಿದರು.  | Kannada Prabha

ಸಾರಾಂಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಯೋಜನೆಗಳನ್ನು ರೂಪಿಸಿ ಆರೋಗ್ಯ ಸೌಲಭ್ಯ ನೀಡಬೇಕು. ಗ್ರಾಮದಲ್ಲಿ ಈಗಾಗಲೇ ಹಲವು ರಸ್ತೆಗಳ ಅಭಿವೃದ್ಧಿಗೆ, ದೇವಾಲಯಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮದ ಮುಖ್ಯ ರಸ್ತೆ ಸೇರಿ ಬಡಾವಣೆಗಳ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಮಾಡಿದ್ದಾರೆ. ಹೋಬಳಿ ಬಿ. ಹೊನ್ನೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ 15ನೇ ಹಣಕಾಸಿನ ಯೋಜನೆ ಮೂಲಕ ಆರೋಗ್ಯ ಇಲಾಖೆ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ತಾಲೂಕಿನಲ್ಲಿ 40 ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಗ್ರಾಮದಲ್ಲಿ ಸುಮಾರು 65 ಲಕ್ಷದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣವಾಗಲಿದೆ. ಸುಸಜ್ಜಿತ ಹೊಸ ಕಟ್ಟಡದಲ್ಲಿ ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಲಿದೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಯೋಜನೆಗಳನ್ನು ರೂಪಿಸಿ ಆರೋಗ್ಯ ಸೌಲಭ್ಯ ನೀಡಬೇಕು. ಗ್ರಾಮದಲ್ಲಿ ಈಗಾಗಲೇ ಹಲವು ರಸ್ತೆಗಳ ಅಭಿವೃದ್ಧಿಗೆ, ದೇವಾಲಯಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮದ ಮುಖ್ಯ ರಸ್ತೆ ಸೇರಿ ಬಡಾವಣೆಗಳ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಚನ್ನರಾಯಪಟ್ಟಣ ತಾಲೂಕು ತೀವ್ರ ಬರಗಾಲದ ಪಟ್ಟಿಗೆ ಸೇರಿದ್ದು ಸರ್ಕಾರದ ಮಾರ್ಗಸೂಚಿ ಅನ್ವಯ ರೈತರಿಗೆ ಪರಿಹಾರ ಸಿಗಬೇಕು. ಜೊತೆಗೆ ಪರಿಹಾರದ ಹಣ ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಬೇಡಿಕೆಯಷ್ಟು ತಾಲೂಕಿಗೆ ಪ್ರತಿದಿನ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಸಂಜೆ ವೇಳೆಯಲ್ಲಿ ಹೆಚ್ಚಿನ ಲೋಡ್ ಸೆಡ್ಡಿಂಗ್ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡುವುದಾಗಿ ಹೇಳಿದರು.

ಮಾಜಿ ಎಪಿಎಂಸಿ ಅಧ್ಯಕ್ಷ ಬಿ.ಎಚ್. ಶಿವಣ್ಣ ಮಾತನಾಡಿದರು. ತಾಪಂ ಮಾಜಿ ಸದಸ್ಯ ಓಬಳಾಪುರ ಬಸವರಾಜ್, ತಾಲೂಕು ಟಿಎಪಿಎಂಎಸ್ ಮಾಜಿ ನಿರ್ದೇಶಕ ಬಾಗೂರು ಮನು, ಗುತ್ತಿಗೆದಾರರಾದ ಗೋಪಾಲ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣೇಗೌಡ (ಸ್ವಾಮಿ ) ಉಪಾಧ್ಯಕ್ಷೆ ವರಲಕ್ಷ್ಮಿ, ಕಾಂತರಾಜ್, ಮುಖಂಡರಾದ ಹುಲಿಕೆರೆ ಸಂಪತ್ ಕುಮಾರ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ
ಸರ್ಕಾರದ ಅನುದಾನದ ಜೊತೆಗೆ ದಾನಿಗಳ ನೆರವು ಪಡೆಯಿರಿ: ವಿಜಯ ಮಾನೆ