ಮಕ್ಕಳ ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಿ: ಗುರುಪ್ರಸಾದ್

KannadaprabhaNewsNetwork |  
Published : Feb 02, 2025, 01:03 AM IST
ಕ್ಯಾಪ್ಷನ1ಕೆಡಿವಿಜಿ32 ದಾವಣಗೆರೆ ಸಮೀಪದ ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯನ್ನು ಗುರುಪ್ರಸಾದ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳ ಕುತೂಹಲ ಕೆರಳಿಸುವ ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಡುವ ಮೂಲಕ ಅವರನ್ನು ಉತ್ತಮ ನಾಗರೀಕರನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮಲ್ಲೆರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ ಹೇಳಿದ್ದಾರೆ.

ದಾವಣಗೆರೆ: ಮಕ್ಕಳ ಕುತೂಹಲ ಕೆರಳಿಸುವ ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಡುವ ಮೂಲಕ ಅವರನ್ನು ಉತ್ತಮ ನಾಗರೀಕರನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮಲ್ಲೆರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ ಹೇಳಿದರು.

ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾ ಬಾಲಭವನ ಸಮಿತಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಹಯೋಗದಲ್ಲಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಮಗುವಿನಲ್ಲಿ ಸುಪ್ತವಾಗಿ ಅಡಗಿರುವ ಜ್ಞಾನವನ್ನು ಬೆಳಕಿಗೆ ತರಲು ಪೂರಕ ವಾತಾವರಣ ನಿರ್ಮಾಣ ಮಾಡಬೇಕಿದೆ. ಅವರ ಶೈಕ್ಷಣಿಕ ಜವಾಬ್ದಾರಿ ಶಿಕ್ಷಕರದಷ್ಟೇ ಅಲ್ಲ, ಪೋಷಕರ ಮೇಲಿಯೂ ಬಹಳಷ್ಟಿದೆ. ಮಕ್ಕಳ ಕನಸುಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಬೇಕಿದೆ. ಮಗು ಅನಿಸಿಕೆಗಳನ್ನು ಸ್ವತಃ ನಿರ್ಭೀತಿಯಿಂದ ಅಭಿವ್ಯಕ್ತಿಪಡಿಸುವ ಅವಕಾಶ ಮಾಡಿಕೊಡಬೇಕಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಂ.ಗುರುಸಿದ್ಧ ಸ್ವಾಮಿ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಬಾಲ ಭವನದ ಸಂಯೋಜಕಿ ಎಸ್.ಬಿ. ಶಿಲ್ಪ, ಶಾಲೆಯ ಎ.ಎಚ್. ಸಿದ್ಧಲಿಂಗ ಸ್ವಾಮಿ, ಮುಖ್ಯೋಪಾಧ್ಯಾಯಿನಿ ಸಾವಿತ್ರಿ, ಉದಯರವಿ ಕಾನ್ವೆಂಟ್ ಶಾಲೆಯ ನಾಗರತ್ನ, ತೌಜು, ಸರ್ಕಾರಿ ಪ್ರೌಢಶಾಲೆಯ ಕೆ.ಸರಸ್ವತಿ ಇತರರು ಭಾಗವಹಿಸಿದ್ದರು.

- - - -1ಕೆಡಿವಿಜಿ32.ಜೆಪಿಜಿ:

ದಾವಣಗೆರೆ ಸಮೀಪದ ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯನ್ನು ಗುರುಪ್ರಸಾದ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ