ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೋಂದಣಿ ಹಾಗೂ ಸ್ವಚ್ಛತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನೋಂದಣಿ ಮಾಡಿಕೊಳ್ಳಲು ಪ್ರತ್ಯೇಕ ಮೊಬೈಲ್ ಆ್ಯಪ್ ರಚಿಸುವ ಜೊತೆಗೆ ಅನಿವಾರ್ಯ ಸಂದರ್ಭಗಳಲ್ಲಿ ಆಫ್‌ಲೈನ್‌ನಲ್ಲೂ ನೋಂದಣಿ ಮಾಡಿಕೊಂಡು ಕಸಾಪದಿಂದ ಆನ್ ಲೈನ್ ನ್‌ಗೆ ಪರಿವರ್ತಿಸಲಾಗುವುದು ಎಂದರು.
ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ಪ್ರತಿನಿಧಿ ಶುಲ್ಕ ನಿಗದಿಪಡಿಸಿ ಆನ್ ಲೈನ್‌ನಲ್ಲೇ ಪಡೆಯಲಾಗುವುದು. ನೋಂದಣಿ ಸಂದರ್ಭದಲ್ಲೇ ವಸತಿ ಅಗತ್ಯವಿರುವವರ ಮಾಹಿತಿ ಪಡೆದುಕೊಳ್ಳಲಾಗುವುದು. ಮೊದಲು ನೋಂದಾಯಿಸಿ ಕೊಂಡವರಿಗೆ ಆದ್ಯತೆ ಮೇಲೆ ವಸತಿ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.ಪ್ರತಿನಿಧಿಗಳಿಗೆ ವಸತಿ ಬಗ್ಗೆ ಮಾರ್ಗದರ್ಶನ ಮಾಡಲು ನೋಡಲ್ ಅಧಿಕಾರಿಗಳನ್ನಾಗಿ ಸಮಿತಿ ಸದಸ್ಯರನ್ನು ನೇಮಕ, ಸೌಲಭ್ಯ ಒದಗಿಸುವ ದೃಷ್ಟಿಯಿಂದ ಅಂತಿಮ ದಿನಾಂಕ ನಿಗದಿ ಮಾಡಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗುವುದು ಎಂದರು.
ಮಂಡ್ಯ ಬೆಲ್ಲ, ಸಕ್ಕರೆ ನೀಡಲು ಸಲಹೆ ನೋಂದಾಯಿತ ಪ್ರತಿನಿಧಿಗಳಿಗೆ ಸಮ್ಮೇಳನದ ವತಿಯಿಂದ ನೀಡಲಾಗುವ ಕೊಡುಗೆಗಳನ್ನು ಜಿಲ್ಲಾವಾರು ಕೌಂಟರ್‌ಗಳನ್ನು ತೆರೆದು ವಿತರಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಶಾಸಕರು ಅನುಮೋದಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಮಾತನಾಡಿ ಸಮ್ಮೇಳನದಲ್ಲಿ ಅಡುಗೆ ಮನೆ, ವೇದಿಕೆ ಕಾರ್ಯಕ್ರಮ, ಶೌಚಾಲಯ, ಪಾರ್ಕಿಂಗ್ ಸ್ಥಳಗಳಲ್ಲಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ನಿಯೋಜಿಸಬೇಕು. ಅವರಿಗೆ ಮಾಸ್ಕ್, ಟೀ ಶರ್ಟ್ ನೀಡಬೇಕು. ಸಮ್ಮೇಳನ ನಡೆಯುವ ಜಾಗದ ಸುತ್ತ ಮುತ್ತಲೂ ಅಲ್ಲಲ್ಲೇ ಕಸದ ಬುಟ್ಟಿಗಳನ್ನು ಇಡಬೇಕು ಎಂದರು.