ಕನ್ನಡಪ್ರಭ ವಾರ್ತೆ ಶಿರಾ
ನಗರಸಭಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶಿರಾದಲ್ಲಿ ಇ- ಖಾತೆ ಅಭಿಯಾನ ಆರಂಭಿಸಿ ಕಳೆದ ಒಂದು ವರ್ಷದಲ್ಲಿ ಸುಮಾರು 6 ಸಾವಿರಕ್ಕೂ ಅಧಿಕ ಇ- ಖಾತೆ ಮಾಡಲಾಗಿದೆ. ಇಷ್ಟು ಇ-ಖಾತೆಗಳು ಎಲ್ಲಿಯೂ ಆಗಿಲ್ಲ. ಇದಕ್ಕೆ ನಗರಸಭೆ ಪೌರಾಯುಕ್ತರು ಹಾಗೂ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. 94 ಸಿಸಿ ಅಡಿಯಲ್ಲಿ ಹಕ್ಕು ಪತ್ರ ಪಡೆದಿರುವ ಸ್ವತ್ತುಗಳು, ಶಿರಾ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮೋದೆಯಾಗಿರುವ ಬಡಾವಣೆಯಲ್ಲಿರುವ ಸ್ವತ್ತುಗಳು, ಗ್ರಾಮ ಠಾಣಾದಲ್ಲಿರುವ ಸ್ವತ್ತುಗಳು, ನಿಗಮ ಮಂಡಳಿಗಳ ಮೂಲಕ ನೀಡಿರುವ ಸ್ವತ್ತುಗಳು ಎ- ಖಾತಾ ಆಗುತ್ತವೆ ಹಾಗೂ ಆಸ್ತಿದಾರರು 2024ರ ಸೆಪ್ಟೆಂಬರ್ 10ಕ್ಕಿಂತ ಮುಂಚೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗಿರುವವರು ಮಾತ್ರ ಬಿ-ಖಾತಾ ಮಾಡಿಸಲು ಅರ್ಹರಿರುತ್ತಾರೆ. ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ಹಾಗೂ ಭೂಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳನ್ನು ಅನಧಿಕೃತ ಆಸ್ತಿಗಳೆಂದು ಪರಿಗಣಿಸಿ ಬಿ-ಖಾತಾದಲ್ಲಿ ನಮೂದಿಸಲಾಗುವುದು. ಬಿ-ಖಾತೆ ಪಡೆಯುವುದರಿಂದ ಮಾಲೀಕರ ಸ್ವತ್ತಿಗೆ ಹಕ್ಕು ದಾಖಲಾಗುತ್ತದೆ. ನಗರಸಭೆಗೆ ತೆರಿಗೆಯೂ ಬರುತ್ತದೆ ಎಂದರು.
7 ದಿನದಲ್ಲಿ ಇ- ಆಸ್ತಿ ಕೈಗೆ:ನಗರಸಭೆ ಪೌರಾಯುಕ್ತ ರುದ್ರೇಶ್.ಕೆ. ಮಾತನಾಡಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 3 ತಿಂಗಳೊಳಗಾಗಿ ಬಿ- ಖಾತೆಗಳನ್ನು ನೀಡುವಂತೆ ಆದೇಶಿಸಲಾಗಿದ್ದು, ಬಿ- ಖಾತಾದಲ್ಲಿ ದಾಖಲಿಸಲಾಗುವ ಆಸ್ತಿಗಳಿಗೆ ಮೊದಲ ಬಾರಿಗೆ ಸ್ವತ್ತಿಗೆ ಶೇ. 2 ರಷ್ಟು ತೆರಿಗೆ ವಿಧಿಸಲಾಗುವುದು. ಶಿರಾ ನಗರಸಭಾ ವ್ಯಾಪ್ತಿಯಲ್ಲಿ ಎ- ಖಾತಾ, ಬಿ- ಖಾತಾ ಅಭಿಯಾನ ಹಮ್ಮಿಕೊಂಡಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.
ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್‌ಕುಮಾರ್, ನಗರಸಭೆ ಕಂದಾಯ ಅಧಿಕಾರಿ ಮಂಜುನಾಥ್, ನಗರಸಭೆ ಸದಸ್ಯರಾದ ಆರ್.ರಾಮು, ನಗರಸಭೆ ಆಶ್ರಯ ಸಮಿತಿ ಸದಸ್ಯ ವಾಜರಹಳ್ಳಿ ರಮೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠ, ನಗರ ಅಧ್ಯಕ್ಷ ಅಂಜನ್ ಕುಮಾರ್ ಸೇರಿ ಹಲವರು ಹಾಜರಿದ್ದರು.