ಕನ್ನಡಪ್ರಭ ವಾರ್ತೆ ಬೆಂಗಳೂರು
ಸುಪ್ರೀಂಕೋರ್ಟ್ ಸೂಚನೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಪಟಾಕಿ ಸಿಡಿಸುವುದಕ್ಕೆ ಕೆಲವು ನಿಯಂತ್ರಣವನ್ನು ಬಿಬಿಎಂಪಿ ವಿಧಿಸಿದೆ. ಅ. 31ರಿಂದ ನ. 2ರವರೆಗೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಮಯಗಳಲ್ಲಿ ಪಟಾಕಿ ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಾಸಾಯನಿಕಯುಕ್ತ ಪಟಾಕಿಯನ್ನೂ ನಿಷೇಧಿಸಲಾಗಿದ್ದು, ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಬೇಕು. ಒಂದು ವೇಳೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವುದು ಕಂಡು ಬಂದರೆ ಅಂತಹವರ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.