ಕನ್ನಡಪ್ರಭ ವಾರ್ತೆ ಬೆಂಗಳೂರು
ವಿವಿ ಹಾಗೂ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಜಯನಗರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಬಹುದೊಡ್ಡ ಆರೋಗ್ಯ ವಿವಿ ಎಂಬ ಹೆಗ್ಗಳಿಕೆ ಗಳಿಸಿರುವ ನಾವು ಸಾಮಾಜಿಕ ಹಾಗೂ ಸಮುದಾಯ ಆರೋಗ್ಯ ರಕ್ಷಣೆಯ ಜೊತೆಗೆ ಕನ್ನಡ ಭಾಷೆ, ನೆಲ, ಜಲ ಮತ್ತು ಪರಂಪರೆಯ ಬೇರನ್ನು ಗಟ್ಟಿಗೊಳಿಸುವ ಕೆಲಸದಲ್ಲೂ ಹಿಂದೆ ಬಿದ್ದಿಲ್ಲ. ವಿವಿಗೆ ಪ್ರವೇಶ ಪಡೆಯುವ ಹೊರ ರಾಜ್ಯ, ವಿದೇಶಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.ಕನ್ನಡಾಭಿಮಾನವನ್ನು ಕೇವಲ ಮಾತಿನಲ್ಲಿ ಮಾತ್ರವಲ್ಲ, ಆಚರಣೆಯಲ್ಲೂ ಪ್ರದರ್ಶಿಸುತ್ತಿದ್ದೇವೆ. ಕನ್ನಡ ಭಾಷೆಯ ಪ್ರಚಾರ-ಪ್ರಸಾರ ನಮ್ಮ ವಿವಿಯ ಸಾಂಸ್ಕೃತಿಕ ಹೊಣೆಗಾರಿಕೆಯೂ, ನಮ್ಮ ಬೌದ್ಧಿಕ ಕರ್ತವ್ಯವೂ ಆಗಿದೆ. ಬಹುತೇಕ ಆಡಳಿತಾತ್ಮಕ ವ್ಯವಹಾರಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ. ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಲು, ವೈದ್ಯಕೀಯ ಸಾಹಿತ್ಯವನ್ನು ವಿಸ್ತರಿಸಲು ವಿವಿಯ ಪ್ರಸಾರಾಂಗದ ಮೂಲಕ ಅಮೂಲ್ಯ ಪುಸ್ತಕಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಹೇಳಿದರು.
ಕುಲಸಚಿವ ಅರ್ಜುನ್ ಒಡೆಯರ್, ಮೌಲ್ಯಮಾಪನ ಕುಲಸಚಿವ ಡಾ.ರಿಯಾಜ್ ಬಾಷಾ, ಹಣಕಾಸು ಅಧಿಕಾರಿ ಬಿಒ.ಕೆ.ಗಂಗಾಧರ ಮಾತನಾಡಿದರು.-ಬಾಕ್ಸ್-
ನಾನು ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಕನ್ನಡದಲ್ಲಿ 125 ಕ್ಕೆ 123 ಅಂಕ ಗಳಿಸಿದ್ದೆ. ವೈದ್ಯನಾಗಬೇಕೆಂಬ ಮಹದಾಸೆ ಇತ್ತು. ಆದರೆ ಸಿಇಟಿಯಲ್ಲಿ ಕಡಿಮೆ ರ್‍ಯಾಂಕ್ ಬಂದಿದ್ದರಿಂದ ಇಂಜಿನಿಯರಿಂಗ್ ಅಭ್ಯಾಸ ಮಾಡಿದೆ ಎಂದು ನಟ ಡಾಲಿ ಧನಂಜಯ ಮನದಾಳದ ಮಾತುಗಳನ್ನು ಹಂಚಿಕೊಂಡರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಜಯನಗರದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸ್ಯ ಲೇಖಕ ಎಂ.ಎಸ್.ನರಸಿಂಹಮೂರ್ತಿ ಉದ್ಘಾಟಿಸಿದರು. ವಿವಿ ಕುಲಪತಿ ಡಾ.ಬಿ.ಸಿ.ಭಗವಾನ್, ನಟ ಡಾಲಿ ಧನಂಜಯ ಮತ್ತಿತರರು ಹಾಜರಿದ್ದರು.