ಮೂಲಭೂತ ಹಕ್ಕುಗಳೊಂದಿಗೆ ಕರ್ತವ್ಯ ಪಾಲನೆಯೂ ಆಗಲಿ

KannadaprabhaNewsNetwork |  
Published : Nov 27, 2026, 02:00 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತವು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ, ಹಕ್ಕುಗಳನ್ನು ಕೇಳುವ ಜತೆಗೆ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ.

ಧಾರವಾಡ:

ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ, ಹಕ್ಕುಗಳನ್ನು ಕೇಳುವ ಜತೆಗೆ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತವು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿದ ಅವರು, ಮೂಲಭೂತ ಕರ್ತವ್ಯಗಳು ನಮ್ಮನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತವೆ. ಉತ್ತಮ ನಾಗರಿಕರಾಗುವ ಮೂಲಕ ದೇಶ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಹಕ್ಕುಗಳನ್ನು ಕೇಳುವುದು ಸುಲಭವಾದರೂ, ನಮ್ಮ ಮೇಲಿರುವ ಜವಾಬ್ದಾರಿಗಳನ್ನು ನಿರ್ವಹಿಸುವುದು ಕಷ್ಟಕರ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಅರಿತು ಪಾಲಿಸಬೇಕು ಎಂದರು.

ರಾಷ್ಟ್ರಧ್ವಜ, ರಾಷ್ಟ್ರಗೀತೆ ಸೇರಿದಂತೆ ರಾಷ್ಟ್ರೀಯ ಚಿಹ್ನೆಗಳನ್ನು ಗೌರವಿಸುವುದು, ಸಂವಿಧಾನದ ರಾಷ್ಟ್ರತ್ವದ ಪರಿಕಲ್ಪನೆ ಎತ್ತಿಹಿಡಿಯುವುದು, ಸುತ್ತಮುತ್ತಲಿನ ಎಲ್ಲರನ್ನು ಸಹೋದರರು ಮತ್ತು ಸಹೋದರಿಯರಂತೆ ಕಾಣುವುದು ಹಾಗೂ ನಾಡಿನ ನೈಸರ್ಗಿಕ ಸಂಪನ್ಮೂಲ ಸಂರಕ್ಷಿಸಿ ಸ್ವಚ್ಛವಾಗಿಡುವುದು ಮೂಲಭೂತ ಕರ್ತವ್ಯಗಳು ಎಂದರು.

ಉಪವಿಭಾಗಾಧಿಕಾರಿ ಪ್ರಭಾವತಿ ಪಕೀರಪುರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಇದ್ದರು. ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸಂವಿಧಾನ ಪೀಠಿಕೆ ಬೋಧಿಸಿದರು. ಡಾ. ಮಹದೇವಪ್ಪ ದಳಪತಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ಎಸ್.ಎಸ್. ಪಡೆದ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುಂಡಲೀಕ ಮಾನವರ ವಂದಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು. ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂವಿಧಾನ ಆಶಯಗಳ ಅರಿತು ಪಾಲಿಸುವುದು ಪ್ರತಿ ಪ್ರಜೆಯ ಕರ್ತವ್ಯ-ನಾಗರಾಜ
ಸಭೆ ಅರ್ಧಕ್ಕೆ ಎದ್ದು ಹೋದ ಟಿ.ಎಂ. ಶಾಹಿದ್ ತೆಕ್ಕಿಲ್