ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪರ್ಯಾಯ ವ್ಯವಸ್ಥೆಗೆ ಸಿದ್ಧತೆ
ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 120 ಖಾಸಗಿ ವಾಹನಗಳು ಇದ್ದು ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ಬಸ್ಸು ನಿಲ್ದಾಣಗಳಿಂದಲೇ ಕಾರ್ಯಾಚರಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ. 88 ವಾಹನಗಳನ್ನು ಬೆಂಗಳೂರು, ಕೋಲಾರ, ಚಿಂತಾಮಣಿ, ಬಾಗೇಪಲ್ಲಿ ಮತ್ತು ಗೌರಿಬಿದನೂರು ಪಟ್ಟಣಗಳಿಗೆ ಕಾರ್ಯಚರಣೆ ಮಾಡಲು ಕ್ರಮವಹಿಸಲಾಗುವುದು. ಜಿಲ್ಲೆಯಲ್ಲಿ ಇರುವ ಒಟ್ಟು 219 ಮ್ಯಾಕ್ಸಿಕ್ಯಾಬ್‌ಗಳನ್ನು ಉಪಯೋಗಿಸಿಕೊಂಡು ವಿವಿಧ ಸ್ಥಳೀಯ ಗ್ರಾಮಗಳಿಂದ ಆಚರಣೆಯನ್ನು ಮಾಡಲಾಗುವುದು ಎಂದು ಹೇಳಿದರು.ಜಿಲ್ಲೆಯಲ್ಲಿನ ಸುಮಾರು 581 ಖಾಸಗಿ ಶಾಲಾ ವಾಹನಗಳನ್ನು ಸಹ ಸಾರ್ವಜನಿಕ ಪ್ರಯಾಣಿಕರ ಅನುಕೂಕ್ಕಾಗಿ ಉಪಯೋಗಿಸಿಕೊಳ್ಳಲಾಗುವುದು. ಜಿಲ್ಲೆಯಲ್ಲಿರುವ ಆಟೋಗಳನ್ನು ಸಹ ಸ್ಥಳಿಯ ಹತ್ತಿರದ ಗ್ರಾಮಗಳಿಂದ ಕಾರ್ಯಾಚರಣೆಗೊಳಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿನ ಒಟ್ಟು 51 ಖಾಸಗಿ ಸೇವಾ ವಾಹನಗಳನ್ನು ಸಹ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಾರ್ಯಾಚರಣೆ ಮಾಡಲಾಗುವುದು. ಒಟ್ಟು 1059 ವಾಹನಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವ್ಯವಸ್ಥೆ ಮಾಡಲಾಗಿರುತ್ತದೆ. ಇವುಗಳು ಬಸ್ಸು ನಿಲ್ದಾಣಗಳಿಂದಲೇ ಕಾರ್ಯಾಚರಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ನಡೆದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿಯ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣ ಅಧಿಕಾರಿ ವಿ ಬಸವರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರಿ, ಚಿಂತಾಮಣಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಬೈರಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.