ಸರ್ಕಾರಿ ಶಾಲೆ ಉಳಿಸಲು ಹಳೆಯ ವಿದ್ಯಾರ್ಥಿಗಳಿಂದ ಸಾಧ್ಯ: ಬಿಇಒ ರಾಜೇಗೌಡ

KannadaprabhaNewsNetwork |  
Published : Jun 30, 2025, 12:34 AM IST
27ಎಚ್ಎಸ್ಎನ್19 : ಅಮ್ಮನ ಬ್ಯಾಟರಹಳ್ಳಿಯಲ್ಲಿ ಸರ್ಕಾರಿ ಪಾಠಶಾಲೆಯಲ್ಲಿ ಟಿವಿ ನೀಡಿದ ಹಳೆ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ರಿಂದ ಸನ್ಮಾನ ಮಾಡಲಾಯಿತು. | Kannada Prabha

ಸಾರಾಂಶ

ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಮ್ಮನ ಬ್ಯಾಟರಹಳ್ಳಿ ಸರ್ಕಾರಿ ಶಾಲೆಗೆ ಸ್ಮಾರ್ಟ್‌ ಟೀವಿ ಕೊಡುಗೆ

ಹಳೇಬೀಡು: ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಕಷ್ಟವಾಗಿದೆ. ಕಾರಣ ಖಾಸಗಿ ಶಾಲೆಯ ಮೇಲೆ ಪೋಷಕರ ವ್ಯಾಮೋಹ ಹೆಚ್ಚಾಗಿದೆ ಎಂದು ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಬೇಸರ ವ್ಯಕ್ತಪಡಿಸಿದರು.

ಹಳೇಬೀಡು ಸಮೀಪದ ಅಮ್ಮನ ಬ್ಯಾಟರಹಳ್ಳಿಯ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಟಿವಿ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಬೇಲೂರು ತಾಲೂಕು ಹೆಚ್ಚಿನ ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಕಷ್ಟಕರವಾಗಿದೆ. ಏಕೆಂದರೆ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲೂ ಬೇಲೂರು ತಾಲೂಕಿನ ಮಲೆನಾಡಿನ ಭಾಗದಲ್ಲಿ ಕಾಫಿ ತೋಟಗಳ ಕೂಲಿ ಕಾರ್ಮಿಕರು ಹೆಚ್ಚಾಗಿ ಇರುವ ಪ್ರದೇಶದ ಶಾಲೆಗಳಲ್ಲಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಚನೆ ಕಡಿಮೆ. ಇದರ ಮಧ್ಯೆ ಖಾಸಗಿ ಶಾಲೆಗಳ ವ್ಯಾಮೋಹ ಪೋಷಕರಲ್ಲಿ ಹೆಚ್ಚಾಗಿದೆ. ಇದನ್ನು ಹೋಗಲಾಡಿಸುವುದು ಹಳೆ ವಿದ್ಯಾರ್ಥಿಗಳ ಸಂಘದಿಂದ ಸಾಧ್ಯ ಹಾಗೂ ಹಳೆಯ ವಿದ್ಯಾರ್ಥಿಗಳು ಶಾಲೆಯ ಬಗ್ಗೆ ಹೆಚ್ಚು ಗಮನ ನೀಡಿದರೆ ಶಾಲೆಗಳು ಸಹ ಮುಂದೆ ಬರುತ್ತವೆ. ಮಕ್ಕಳ ಸಂಖ್ಯೆ ಹೆಚ್ಚಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಜಯಪ್ರಕಾಶ್ ಮಾತನಾಡುತ್ತಾ, ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮಕ್ಕಳು ಇದನ್ನು ಉಪಯೋಗಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ವಹಿಸಿಕೊಂಡಿದ್ದರು. ಇಲಾಖೆಯ ಇಸಿಒ ಉಮೇಶ್, ಬಿಆರ್‌ಪಿ ಕುಮಾರ್‌, ಸಿಆರ್‌ಪಿ ಚಂದ್ರಕಲಾ, ಸಹಶಿಕ್ಷಕ ತೀರ್ಥಕುಮಾರ್ ಹಾಗೂ ಶಾಲೆ ಮಕ್ಕಳು, ಗ್ರಾಮಸ್ಥರು ಹಾಜರಿದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ