ಕನ್ನಡಪ್ರಭ ವಾರ್ತೆ ಆಲೂರು
ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮುರುಳಿ ಮೋಹನ್‌ರವರು ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಂದಿ ಸಾಧಕರಿಗೆ ಸಮಾಜ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಜೆ.ಕೃಷ್ಣೇಗೌಡರು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ೧೪ ಮಂದಿ ಸಾಧಕರಿಗೆ ಶಿಕ್ಷಣ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆಲೂರು ತಾಲ್ಲೂಕು ನಾಗರೀಕ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್. ಮಂಜೇಗೌಡರು ಸಂಘಟನಾ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ಕು ಮಂದಿ ಸಾಧಕರಿಗೆ ಸಂಘಟನಾ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪತ್ರಕರ್ತ ಹಾಗೂ ಸಾಹಿತಿ ನಾಗರಾಜ್ ಹೆತ್ತೂರು ಕೆ.ಎ.ಧರಣೇಂದ್ರರಾಜ್ ಕುಂದೂರು ಅವರ ಧರಣಿ ಮಂಡಲದೊಳಗೆ ಕವನ ಸಂಕಲನ, ಡಿ.ಸುಜಲಾದೇವಿ ಕುಂದೂರು ಅವರ ಮನೆ ಗೆದ್ದು ಮಾರುಗೆಲ್ಲು ಮಕ್ಕಳ ಕಥಾ ಸಂಕಲನ, ಪತ್ರಕರ್ತ ಜೆ. ಆರ್. ರವಿಕುಮಾರ್ ಅವರ ಕನ್ನಡಮ್ಮ ಬಂದಳು ದಾರಿ ಬಿಡಿ ಕವನ ಸಂಕಲನಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲೀಲಾವತಿ, ವೇದಿಕೆಯ ತಾಲೂಕು ಗೌರವಾಧ್ಯಕ್ಷ ಎಂ. ಬಾಲಕೃಷ್ಣ, ಚೇತನ ಬಳಗದ ಸಂಸ್ಥಾಪಕ ಅಧ್ಯಕ್ಷ ಹರೀಶ್, ಜಿಲ್ಲಾಧ್ಯಕ್ಷ ವಾಸು ಸಮುದ್ರವಳ್ಳಿ, ರಾಜ್ಯ ಸರಕಾರಿ ನೌಕರರ ಸಂಘದತಾಲ್ಲೂಕುಅಧ್ಯಕ್ಷಡಿ.ಎಂ. ವರದರಾಜ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಜೆ.ಪೃಥ್ವಿರಾಮ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಆರ್. ಶ್ರೀನಿವಾಸ್, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಇ. ಜಯರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಎಂ. ಬಾಲಕೃಷ್ಣ, ತಾಲೂಕು ಉಪಾಧ್ಯಕ್ಷ ಟಿ.ಕೆ.ನಾಗರಾಜ್, ತಾಲೂಕು ಕಾರ್ಯದರ್ಶಿ ಧರ್ಮ ಕೆರಲೂರು, ತಾಲೂಕು ಮಹಿಳಾ ಕಾರ್ಯದರ್ಶಿ ಚಂದ್ರಕಲಾ ಎಂ.ಆಲೂರು, ತಾಲೂಕು ಖಜಾಂಚಿ ಡಿ.ಸಿ. ಬಸವರಾಜ್, ತಾಲೂಕು ಸಹ ಕಾರ್ಯದರ್ಶಿ ಅಶ್ವಿನಿ ಅನಿಲ್ ಮುಂತಾದವರಿದ್ದರು.