ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ, ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕ ರವಿ ನಾಕಲಗೂಡು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಹಿತ್ಯವು ಕೇವಲ ಅಕ್ಷರಗಳ ಜೋಡಣೆಯಲ್ಲ; ಅದು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಬದುಕಿನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿಯಾಗಿದೆ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಸಾಹಿತ್ಯ ಸಮಾಜದ ಆತ್ಮಸಾಕ್ಷಿಯಾಗಿದ್ದು, ಅನ್ಯಾಯವನ್ನು ಪ್ರಶ್ನಿಸಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಎಂದರು.
ಕನ್ನಡಪ್ರಭ ವಾರ್ತೆ ಆಲೂರುತಾಲೂಕು ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದ್ದರೂ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಬೇಕು ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ 4ನೇ ಸಮ್ಮೇಳನದ ಸರ್ವಾಧ್ಯಕ್ಷೆ ಡಿ. ಸುಜಲಾದೇವಿ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರು, ಹಾಸನ ಜಿಲ್ಲಾ ಹಾಗೂ ಆಲೂರು ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಾಲ್ಕನೇ ಆಲೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಅವರು, ಇಂಗ್ಲಿಷ್ ಕಲಿಕೆಗೆ ವಿರೋಧವಿಲ್ಲವಾದರೂ ಕನ್ನಡ ಭಾಷೆಯ ಬಳಕೆ, ಕಲಿಕೆ ಮತ್ತು ಪುಸ್ತಕ ಓದುವ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮದುವೆ ಮತ್ತಿತರ ಸಮಾರಂಭಗಳಲ್ಲಿ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವ ಸಂಸ್ಕೃತಿ ಬೆಳೆಸಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಗ್ರಂಥಾಲಯಗಳನ್ನು ಪುನಶ್ಚೇತನಗೊಳಿಸಿ ಓದುವ ಸಂಸ್ಕೃತಿಯನ್ನು ಮನೆಮನೆಗೂ ತಲುಪಿಸಬೇಕು ಎಂದು ಕರೆ ನೀಡಿದರು.
ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ, ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕ ರವಿ ನಾಕಲಗೂಡು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಹಿತ್ಯವು ಕೇವಲ ಅಕ್ಷರಗಳ ಜೋಡಣೆಯಲ್ಲ; ಅದು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಬದುಕಿನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿಯಾಗಿದೆ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಸಾಹಿತ್ಯ ಸಮಾಜದ ಆತ್ಮಸಾಕ್ಷಿಯಾಗಿದ್ದು, ಅನ್ಯಾಯವನ್ನು ಪ್ರಶ್ನಿಸಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಎಂದರು. ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ, ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್ ಅವರು ರಾಜ್ಯ ಮಟ್ಟದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಸಂಘ ತೆರೆದು ರಾಜ್ಯಾದ್ಯಂತ ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆಗೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅವರು ಪ್ರಾಸ್ತಾವಿಕ ಮಾತನಾಡಿ, ಸಾಹಿತ್ಯ ಕ್ಷೇತ್ರ ಎಂದಿಗೂ ಚಿರಾಯುವಾಗಿ ಹರಿದಾಡುವಂತೆ ಜಾಗ್ರತೆ ವಹಿಸಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜಿ. ಕೃಷ್ಣೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್. ಮಂಜುಗೌಡ, ಪತ್ರಕರ್ತ ಹಾಗೂ ಸಾಹಿತಿ ಹೆತ್ತೂರು ನಾಗರಾಜ್, ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಲೀಲಾವತಿ, ಚೇತನ ಬಳಗದ ಅಧ್ಯಕ್ಷ ಎಂ.ಪಿ. ಹರೀಶ್, ಎಂ. ಬಾಲಕೃಷ್ಣ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷ ಕೃಷ್ಣೇಗೌಡ ಮಣ ಪುರ, ತಾಲೂಕು ನೌಕರ ಸಂಘದ ಅಧ್ಯಕ್ಷ ವರದರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ ನಾಕಲಗೂಡು, ಕಾಂಗ್ರೆಸ್ ಮುಖಂಡ ಶಾಂತಕೃಷ್ಣ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಬಿ. ಆರ್. ಧರ್ಮ, ಸಿ. ಎಸ್. ಅಣ್ಣಪ್ಪ, ಎಂ. ಆರ್. ವೇಣುಗೋಪಾಲ, ಸಿ .ಎಸ್ .ಪ್ರವೀಣಕುಮಾರ್ ಅವರಿಗೆ ಸಂಘಟನಾ ಸೇವಾ ಭೂಷಣ ಪ್ರಶಸ್ತಿ ಮತ್ತು ಸಿ. ಎಸ್. ಪೂರ್ಣಿಮ, ಎಂ. ಆರ್. ಚಂದ್ರಮ್ಮ, ಎಚ್. ಡಿ. ದಾಕ್ಷಾಯಿಣಿ , ಆರ್ ಶಿವರಾಂ, ಮಂಜುಳ, ಎಂ. ಡಿ. ಭೂಪಾಲಯ್ಯ, ರಂಗಮ್ಮ, ಎಚ್. ಸಿ. ಜ್ಯೋತಿ , ಈ. ಎಂ. ಭಾಗ್ಯಲಕ್ಷ್ಮಿ, ಡಿ. ಆರ್. ಜಗದೀಶ್, ಧರ್ಮಪ್ರಕಾಶ್, ಭಾನುಮತಿ, ಬೇಬಿ ಹಾಜಿರಾ, ಬಿ. ವಿ. ವೀಣಾ ಅವರಿಗೆ ಶಿಕ್ಷಣ ಸೇವಾ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.