ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಆಲೂರು ಮಲ್ಲು ಮತಯಾಚನೆ

KannadaprabhaNewsNetwork |  
Published : May 30, 2024, 12:55 AM IST
29ಸಿಎಚ್‌ಎನ್‌57 ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರುಮಲ್ಲು ಚಾಮರಾಜ ತಾಲೂಕಿನ ಆಲೂರು ಸರ್ಕಾರಿ ಸಂಯಕ್ತ ಪದವಿಪೂರ್ವ ಕಾಲೇಜಿನಲ್ಲಿ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.

ತಾಲೂಕಿನ ಆಲೂರು ಸರ್ಕಾರಿ ಸಂಯಕ್ತ ಪದವಿಪೂರ್ವ ಕಾಲೇಜು, ಕಾಗಲವಾಡಿ ಸರ್ಕಾರಿ ಪ್ರೌಢ ಶಾಲೆ, ಹೊಂಗನೂರು ಸರ್ಕಾರಿ ಪ್ರೌಢಶಾಲೆ, ಜ್ಯೋತಿಗೌಡನಪುರ ಸರ್ಕಾರಿ ಸರ್ಕಾರಿ ಶಾಲೆ ಹಾಗೂ ಚಂದಕವಾಡಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳಿಗೆ ತೆರಳಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.

ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡಿ ತಮ್ಮಗಳ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಶಿಕ್ಷಕರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು ನಾನಾ ಪಕ್ಷಗಳಲ್ಲಿ ಸ್ಪರ್ಧಿಸಿ ನಾಲ್ಕು ಬಾರಿ ಗೆದ್ದಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಮಾತ್ರ ಈಡೇರಿಸಿಲ್ಲ. ಶಿಕ್ಷಕರ ಹಿತಬಯಸಿಲ್ಲ. ಹಾಗಾಗಿ ಈ ಬಾರಿ ಜೆಡಿಎಸ್, ಬಿಜೆಪಿ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಒಂದು ಅವಕಾಶ ನೀಡಬೇಕು ಎಂದು ಆಲೂರುಮಲ್ಲು ಶಿಕ್ಷಕರಲ್ಲಿ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಆಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ್, ಜೆಡಿಎಸ್ ಮುಖಂಡರಾದ ರಾಮಚಂದ್ರನಾಯಕ, ಪಣ್ಯದಹುಂಡಿ ರಾಜು ಎಲ್‌ಐಸಿ, ಹೊಂಗನೂರು ರಾಜು, ಮುರುಗೇಶ್, ಕಾಗಲವಾಡಿ ನಾಗರಾಜು ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ