ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಕೊಡಗು ಜಿಲ್ಲಾಡಳಿತ, ಕರ್ನಾಟಕ ವಸತಿ ಮತ್ತು ಶಿಕ್ಷಣ ಸಂಸ್ಥೆ ಮತ್ತು ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಅರಿವು ಜಾಥಾ ಆಯೋಜಿಸಲಾಗಿತ್ತು.
ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಆಲೂರುಸಿದ್ದಾಪುರಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಆಲೂರುಸಿದ್ದಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿ ಸ್ವಾಗತಿಸಿದರು,ನಂತರ ಪ್ರಮುಖರು ರಥದಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪ್ರಮುಖರು ವಾದ್ಯಗೋಷ್ಠಿ ಮೆರವಣಿಗೆಯು ಮುಖ್ಯರಸ್ತೆ ಮೂಲಕ ಸಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಗಮಿಸಿತು.
ವೇದಿಕೆಯಲ್ಲಿ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ, ಮಾಜಿ ಉಪಾಧ್ಯಕ್ಷೆ ದಮಯಂತಿ, ಸದಸ್ಯ ಸತೀಶ್‍ಕುಮಾರ್, ಶಾಲಾ ಸಮಿತಿ ಪ್ರಮುಖರಾದ ಪ್ರಭು, ರೇಖ, ನಾಗರತ್ನ, ಜಗದೀಶ್ ಹಾಜರಿದ್ದರು.