ಆಳ್ವರು ಕರ್ನಾಟಕದ ಶಿಕ್ಷಣ ಕ್ಷೇತ್ರದ ಅನರ್ಘ್ಯ ರತ್ನ: ದಿನೇಶ್ ಕುಂದರ್

KannadaprabhaNewsNetwork |  
Published : Mar 18, 2026, 03:00 AM IST
ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ–2026 | Kannada Prabha

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳೂರು ವಿವಿ, ರಾಜೀವ್ ಗಾಂಧಿ ವೈದ್ಯಕೀಯ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಕರ್ನಾಟಕ ಕಾನೂನು ವಿವಿ, ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಹಾಗೂ ಆಳ್ವಾಸ್ ಸ್ವಾಯತ್ತ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ–2026 ಸ್ವರಾಜ್ಯ ಮೈದಾನದಲ್ಲಿ ನಡೆಯಿತು.

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳೂರು ವಿವಿ, ರಾಜೀವ್ ಗಾಂಧಿ ವೈದ್ಯಕೀಯ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಕರ್ನಾಟಕ ಕಾನೂನು ವಿವಿ, ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಹಾಗೂ ಆಳ್ವಾಸ್ ಸ್ವಾಯತ್ತ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ–2026 ಸ್ವರಾಜ್ಯ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಕಸ್ಟಮ್ಸ್ ಇಲಾಖೆಯ ನಿವೃತ್ತ ಅಧೀಕ್ಷಕ ದಿನೇಶ್ ಕುಂದರ್, ಆಳ್ವಾಸ್ ಸಂಸ್ಥೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಒದಗಿಸುತ್ತಿರುವುದು ಪ್ರಶಂಸನೀಯ. ಡಾ. ಎಂ. ಮೋಹನ್ ಆಳ್ವರು ಕರ್ನಾಟಕದ ಶಿಕ್ಷಣ ಕ್ಷೇತ್ರದ ಅನರ್ಘ್ಯ ರತ್ನ. ಆಳ್ವಾಸ್ ಕ್ರೀಡಾ ದತ್ತು ಸ್ವೀಕಾರ ಯೋಜನೆಯಡಿ ದೇಶದ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ತರಬೇತಿ ಪಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೆರೆಯುತ್ತಿರುವುದು ಸಂಸ್ಥೆಯು ಕ್ರೀಡೆಗೆ ನೀಡುತ್ತಿರುವ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಪ್ರತಿ ದಿನ ಕನಿಷ್ಠ ಒಂದು ದೈಹಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು ಗಮನ, ಏಕಾಗ್ರತೆ ಹಾಗೂ ಶಾರೀರಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಚುರುಕಾಗಿ ಅಧ್ಯಯನದ ಮೇಲಿನ ಆಸಕ್ತಿ ಹೆಚ್ಚುತ್ತದೆ. ಮಾನಸಿಕ ಸಮತೋಲನವನ್ನು ಕೂಡ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.ಕ್ರೀಡಾಕೂಟದ ಅಂಗವಾಗಿ ಬಾಲಕರ ಹಾಗೂ ಬಾಲಕಿಯರಿಗಾಗಿ 100 ಮೀ., 200 ಮೀ., 400 ಮೀ. ಮತ್ತು 800 ಮೀ. ಓಟ ಸ್ಪರ್ಧೆಗಳು ನಡೆದವು. ಜೊತೆಗೆ ಬಾಲಕರಿಗೆ 3000 ಮೀಟರ್ ಹಾಗೂ ಬಾಲಕಿಯರಿಗೆ 1500 ಮೀಟರ್ ಓಟದ ಸ್ಪರ್ಧೆಗಳು ನಡೆದವು. ಉದ್ದ ಜಿಗಿತ (ಲಾಂಗ್ ಜಂಪ್), ಶಾಟ್ ಪುಟ್, 4*100 ಮೀಟರ್ ರಿಲೇ ಹಾಗೂ 4*400 ಮೀಟರ್ ರಿಲೇ ಓಟ ಸ್ಪರ್ಧೆಗಳು ನಡೆದವು.ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಯಿತು.ಚಿನ್ನದ ಪದಕ ವಿಜೇತೆ ರೇಖಾ ಬಸಪ್ಪ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಓದಿದರು. ನಾಗೇಂದ್ರ ಅಣ್ಣಪ್ಪ ನಾಯಕ್, ಲಕ್ಷ್ಮೀ ವೈಷ್ಣವಿ ಹಾಗೂ ನಝತ್ ಹೊಸ್ರುರ್, ಸರ್ವಜೀತ್ ಹಾಗೂ ಗೀತಾ ಚೌಕಾಸಿ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು.

ಸಭಾ ಕಾರ್ಯಕ್ರಮವನ್ನು ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಸ್ವಾಗತಿಸಿ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ರೋಷನ್ ಪಿಂಟೋ ವಂದಿಸಿದರು. ಕಾರ್ಯಕ್ರಮವನ್ನು ರಾಜೇಶ್ ಡಿಸೋಜಾ ನಿರೂಪಿಸಿದರು.

ಕಾರ‍್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಅಥ್ಲೀಟ್ ದೀಕ್ಷಿತಾ ಆರ್. ಗೌಡ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕಬಡ್ಡಿ ವಿಶ್ವಕಪ್ ವಿಜೇತ ತಂಡದ ಧನಲಕ್ಷ್ಮೀ ಹಾಗೂ ಆಳ್ವಾಸ್ ಸಂಸ್ಥೆಗಳ ಪ್ರಾಂಶುಪಾಲರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತ, ಜಾತ್ರೆಗೆ ಕ್ಷಣಗಣನೆ
ಮಧ್ಯಪ್ರಾಚ್ಯ ಯುದ್ಧ ಬೆನ್ನಿಗೇ ಕೈಸುಡುತ್ತಿದೆ ಮೊಬೈಲ್‌ ಫೋನ್‌ ದರ!