ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: 27ರಂದು ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ

KannadaprabhaNewsNetwork |  
Published : Apr 24, 2025, 11:48 PM IST
32 | Kannada Prabha

ಸಾರಾಂಶ

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ 27ರಂದು ಅಪರಾಹ್ನ ೪ರಿಂದ ಭಗವಾನ್‌ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ 27ರಂದು ಅಪರಾಹ್ನ ೪ರಿಂದ ಭಗವಾನ್‌ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಮೂಡುಬಿದಿರೆಯ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಎ. ಉಮಾನಾಥ ಕೋಟ್ಯಾನ್, ಮಾಜಿ ಸಚಿವ, ಕೆ. ಅಭಯಚಂದ್ರ ಜೈನ್ ಪಾಲ್ಗೊಳ್ಳುವರು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಮಹಾವೀರ ಜಯಂತಿಯ ಪೂರ್ವಭಾವಿ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.

ಸಂಜೆ ೪ ರಿಂದ ವಿದ್ಯಾರ್ಥಿಗಳಿಂದ ಜಿನಭಜನೆ, ಶ್ರೀ ಮಹಾವೀರ ಸ್ವಾಮಿ ಜಿನಬಿಂಬ ಮೆರವಣಿಗೆ ಹಾಗೂ ಸಂಜೆ ೫.೧೫ರಿಂದ ತೋರಣ ಮುಹೂರ್ತ ಮತ್ತು ಸಂಜೆ ೫.೩೦ಕ್ಕೆ ಜಯಶ್ರೀ ಡಿ. ಜೈನ್, ಹೊರನಾಡು ಅವರಿಂದ ಜಿನಗಾನಾಮೃತ ಜರುಗಲಿದೆ. ಸಂಜೆ ೬.೩೦ಕ್ಕೆ ಶ್ರೀ ಮಹಾವೀರ ಸ್ವಾಮಿ ಜಿನ ಬಿಂಬಕ್ಕೆ ಮಂಗಳದ್ರವ್ಯಾಭಿಷೇಕ ಮತ್ತು ಅಷ್ಟವಿಧಾರ್ಚನೆ ನಡೆಯಲಿದೆ.

ರಾತ್ರಿ 8ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ್ ಎಂ, ಧನಕೀರ್ತಿ ಬಲಿಪ, ಆದಿರಾಜ್ ಜೈನ್, ವಕೀಲೆ ಶ್ವೇತಾ ಜೈನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು