ಇಲ್ಲಿನ ಬಜಗೋಳಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರಕ್ಕೆ ಅ. 11ರಂದು ಶಾಸಕ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಎನ್‌ಎಸ್‌ಎಸ್ ಶಿಬಿರ ವಿದ್ಯಾರ್ಥಿಗಳ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಯುವ ಮನಸ್ಸು ಜಾಗೃತಗೊಳಿಸುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಕಾರ್ಕಳ

ವೈಯಕ್ತಿಕ ನಾಯಕತ್ವ ಜೊತೆಗೆ ತಂಡವಾಗಿ ಕಾರ್ಯನಿರ್ವಹಣೆ ಕುರಿತು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅನುಭವ ದೊರೆಯುವುದು. ಶಿಬಿರದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ಮೂಲಕ ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರಾಜ್ಯ ಫೆಡರೇಶನ್ ಆಫ್ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆ ಕಲಿಕೆಗೆ ಮತ್ತು ಮಕ್ಕಳ ಭವಿಷ್ಯಕ್ಕೆ ಒಂದು ಉತ್ತಮ ವಾತಾವರಣ ಒದಗಿಸುತ್ತಿದೆ ಎಂದರು.
ಮುಡಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಶ್ರುತಿ ಡಿ. ಅಧಿಕಾರಿ ಮಾತನಾಡಿ, ಎನ್‌ಎಸ್‌ಎಸ್ ಶಿಬಿರ ಜೀವನ ಮೌಲ್ಯದೊಂದಿಗೆ ವ್ಯಕ್ತಿತ್ವ ರೂಪಿಸಲು ಸಹಕಾರಿ ಎಂದರು.
ಕೆಎಂಎಫ್ ನಿರ್ದೇಶಕ ಸುಧಾಕರ ಶೆಟ್ಟಿ ಮಾತನಾಡಿ, ಯುವ ಜನತೆ ಕೇವಲ ಪುಸ್ತಕಕ್ಕೆ ಸೀಮಿತವಾಗಿರದೇ ಮಾನವೀಯ ಮೌಲ್ಯ ರೂಢಿಸಿಕೊಳ್ಳಬೇಕು. ಶಿಬಿರದಲ್ಲಿ ಕಲಿತ ಎಲ್ಲಾ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ಮಾತನಾಡಿ, ಜೀವನದಲ್ಲಿ ವಿದ್ಯೆ ಎಂದರೆ ಕೇವಲ ಅಂಕಗಳನ್ನು ಗಳಿಸುವುದಲ್ಲ. ಎನ್ಎಸ್ಎಸ್ ಶಿಬಿರವು ಮಕ್ಕಳಿಗೆ ಸಂವಹನ, ಭ್ರಾತೃತ್ವ, ಸಹಾಯ ಮಾಡುವ ಗುಣ ಹಾಗೂ ಕೂಡಿ ಬಾಳುವ ಕುರಿತು ಮನವರಿಕೆ ಮಾಡಿಕೊಡಲಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.