ಆಳ್ವಾಸ್ ಫಿಸಿಯೋಥೆರಪಿ ಕಾಲೇಜ್‌: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

KannadaprabhaNewsNetwork |  
Published : Oct 15, 2025, 02:08 AM IST
ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ | Kannada Prabha

ಸಾರಾಂಶ

ಆಳ್ವಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ ನೇತೃತ್ವದಲ್ಲಿ ರಾಜೀವ್ ಗಾಂಧಿ ವಿಜ್ಞಾನ ವಿ.ವಿ.ಗಳ ಮಂಗಳೂರು ವಲಯ ಮಟ್ಟದ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ಪಂದ್ಯಾಟ ನೆರವೇರಿತು.

ಮೂಡುಬಿದಿರೆ: ನನ್ನ ಇಂದಿನ ಎಲ್ಲಾ ಸಾಧನೆಗಳಿಗೆ ಆಳ್ವಾಸ್ ಕಾರಣ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮೂಲಕ ಆಳ್ವಾಸ್ ನೀಡಿದ ಅವಕಾಶಗಳು ಮತ್ತು ಮಾರ್ಗದರ್ಶನದಿಂದ ನನ್ನ ಜೀವನದಲ್ಲಿ ಬದಲಾವಣೆ ಸಾಧ್ಯವಾಯಿತು ಎಂದು ಉಡುಪಿ ವಲಯದ ಫಾರೆಸ್ಟ್ ಬೀಟ್ ಆಫೀಸರ್ ಹಾಗೂ ಹಿರಿಯ ವಿದ್ಯಾರ್ಥಿ ಶರತ್ ಶೆಟ್ಟಿ ಹೇಳಿದ್ದಾರೆ.ಆಳ್ವಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ ಆಯೋಜಿಸಿದ್ದ ರಾಜೀವ್ ಗಾಂಧಿ ವಿಜ್ಞಾನ ವಿ.ವಿ.ಗಳ ಮಂಗಳೂರು ವಲಯ ಮಟ್ಟದ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.ಆಳ್ವಾಸ್‌ನ ಶಿಸ್ತು, ಕಠಿಣ ಪರಿಶ್ರಮ ಮತ್ತು ಎಲ್ಲರಿಗೂ ಸಮಾನ ಅವಕಾಶ ನೀಡುವ ವ್ಯವಸ್ಥೆ ನನ್ನಂತಹ ಅನೇಕ ವಿದ್ಯಾರ್ಥಿಗಳನ್ನು ಯಶಸ್ಸಿನ ಹಾದಿಗೆ ಕೊಂಡೊಯ್ದಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್‌ನಲ್ಲಿ ನಿಜವಾದ ಕಲಿಕೆ ಸಂಜೆ ಐದು ಗಂಟೆಯ ನಂತರ ಆರಂಭವಾಗುತ್ತದೆ. ದಿನನಿತ್ಯದ ತರಗತಿಗಳ ನಂತರ ನಡೆಯುವ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಕಲಿಸುತ್ತವೆ. ಇಂತಹ ಕಲಿಕೆಯಲ್ಲಿ ತೊಡಗಿಕೊಂಡವರ ಬದುಕು ಹಸನಾಗಿದೆ ಎಂದು ಹೇಳಿದರು.

ಪುರುಷರ ವಿಭಾಗದಲ್ಲಿ 18, ಮಹಿಳೆಯರ ವಿಭಾಗದಲ್ಲಿ 12 ತಂಡಗಳು ಭಾಗವಹಿಸಿದವು.

ಕಾಲೇಜಿನ ಪ್ರಾಚಾರ್ಯೆ ಪ್ರೊ.ಕ್ಷಮಾ ಸುಶೀಲ್ ಶೆಟ್ಟಿ, ಆಳ್ವಾಸ್ ದೈಹಿಕ ಕಾಲೇಜಿನ ಪ್ರಾಚಾರ್ಯ ಮಧು ಜಿಆರ್, ದೈಹಿಕ ನಿರ್ದೇಶಕ ಅವಿನಾಶ್, ಹರೀಶ್ ಗೌಡ ಇದ್ದರು. ಉದ್ಘಾಟನೆಯ ಬಳಿಕ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ದೊರಕಿತು. ಉಪನ್ಯಾಸಕಿ ಸೌಧ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!