ಜಪಾನ್‌ನ ಸೋಜೊ ವಿಶ್ವವಿದ್ಯಾನಿಲಯ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಒಡಂಬಡಿಕೆ

KannadaprabhaNewsNetwork |  
Published : Dec 17, 2024, 01:04 AM ISTUpdated : Dec 17, 2024, 07:30 AM IST
ಜಪಾನ್‌ನ ಸೋಜೊ ವಿವಿ ಜೊತೆ ಆಳ್ವಾಸ್ ಒಡಂಬಡಿಕೆ ಮಾಡಿಕೊಂಡಿತು. | Kannada Prabha

ಸಾರಾಂಶ

ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.

 ಮೂಡುಬಿದಿರೆ : ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.

ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು.

ಶೈಕ್ಷಣಿಕ ವಿನಿಮಯಕ್ಕೆ ಸಂಬಂಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ.

ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್‌ನ ಪರಿಣಾಮಕಾರಿ ಎಂಜಿನಿಯರಿಂಗ್‌ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ರುಚಿ ಥೋಮೊಶಿಗೆ, ಸೋಜೊ ಅಂತಾರಾಷ್ಟ್ರೀಯ ಕೇಂದ್ರದ ವ್ಯವಸ್ಥಾಪಕಿ ಮಿಯೆ ಒಕುಬೊ, ಮೆಕಾನಿಕಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಡಾ.ಅಕಿಸಾ ಮೊರಿ ಹಾಗೂ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮ್ಯಾಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಇದ್ದರು.

ಡಾ.ಗುರಶಾಂತ್ ವಗ್ಗರ್ ಕಾರ‍್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ