ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ, ಶಿಷ್ಯೋಪನಯನ

KannadaprabhaNewsNetwork |  
Published : Jan 12, 2026, 03:00 AM IST
ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಸಮಾರಂಭ | Kannada Prabha

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಹಾಗೂ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ, ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ಕಾಲೇಜಿನ ಆವರಣದಲ್ಲಿ ನಡೆಯಿತು.ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ, ಡಾ. ಎನ್. ಶೀತಲ್‌ ಕುಮಾರ್, ಬೆಂಗಳೂರಿನ ಭಾರತೀಯ ಆಯುರ್ವೇದ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ರಸಶಾಸ್ತ್ರ ಮತ್ತು ಭೈಷಜ್ಯ ಕಲ್ಪನಾ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜಗದೀಶ್ ಕೋನರೆಡ್ಡಿ, ಕೇರಳದ ಕೊಟ್ಟಕ್ಕಲ್ ಆರ‍್ಯ ವೈಧ್ಯ ಶಾಲೆಯ ಗುಣಮಟ್ಟ ಭರವಸೆ ವಿಭಾಗದ ವೈದ್ಯಾಧಿಕಾರಿ ಮತ್ತು ವಿಭಾಗ ಮುಖ್ಯಸ್ಥ ಡಾ. ಜಿತೇಶ್ ಎಂಕೆ ಅವರಿಗೆ ಶಾಲು, ಹಾರ, ಪ್ರಶಸ್ತಿ ಫಲಕ ಹಾಗೂ 10 ಸಾವಿರ ನಗದಿನೊಂದಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧನ್ವಂತರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾರಾವಿಯ ಪ್ರಸಿದ್ಧ ಆಯುರ್ವೇದ ವೈದ್ಯ, ಡಾ.ಎನ್. ಶೀತಲ್‌ ಕುಮಾರ್, ಆಳ್ವಾಸ್ ಸಂಸ್ಥೆ ರೂಪಿಸಿದ ಸಾಂಸ್ಕೃತಿಕ ಚಳವಳಿಗಳು, ಕಲೆಗಳ ಉತ್ತೇಜನ, ಜನಪದ ಹಾಗೂ ಭಾರತೀಯ ಸಂಸ್ಕೃತಿ ಉಳಿವಿಗೆ ನೀಡಿದ ಕೊಡುಗೆಗಳು ಈ ಕ್ಷೇತ್ರದ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಮಾಡಿದ ಜಾಗೃತ ಪ್ರಯತ್ನವಾಗಿದೆ ಎಂದು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಯುರ್ವೇದ ಶಿಕ್ಷಣ ಕೇವಲ ಪದವಿ ಪ್ರಾಪ್ತಿಯ ಮಾರ್ಗವಲ್ಲ. ಮೌಲ್ಯ–ಶಿಸ್ತು–ಸೇವೆಗಳನ್ನು ಅಳವಡಿಸಿಕೊಳ್ಳುವ ಜೀವನಪಥವಾಗಿದೆ ಎಂದರು.

ಅಲಂಗಾರಿನ ಸುಬ್ರಮಣ್ಯ ಭಟ್‌ ನೇತೃತ್ವದಲ್ಲಿ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ನೆರವೇರಿತು. ಕಾಲೇಜಿನ ಪ್ರಥಮ ವರ್ಷದ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗದ 160 ಮಕ್ಕಳಿಗೆ ಶಿಷ್ಯೋಪನಯನ ಸಂಸ್ಕಾರ ನಡೆಯಿತು.

ಹಿಮಾಲಯ ವೆಲ್‌ನೆಸ್ ಕಂಪನಿ ವತಿಯಿಂದ 2019-20ನೇ ಸಾಲಿನಲ್ಲಿ ಜೀವಕಾ ಪ್ರಶಸ್ತಿಯನ್ನು ಡಾ. ಪ್ರಭು ಆರ್.ಎಚ್. ಹಾಗೂ ಆಯುರ್‌ ವಿಶಾರಧಾ ಪ್ರಶಸ್ತಿಯನ್ನು ಡಾ. ಅಮೂಲ್ಯ ಜಿ ಶೆಟ್ಟಿ ಅವರಿಗೆ, 2020-21ನೇ ಸಾಲಿನಲ್ಲಿ ಜೀವಕಾ ಪ್ರಶಸ್ತಿ ಯನ್ನು ಡಾ. ಸ್ಪಂದನಾ ಪಟೇಲ್ ಹಾಗೂ ಆಯುರ್‌ ವಿಶಾರಧಾ ಪ್ರಶಸ್ತಿಯನ್ನು ಡಾ. ಮನೀಷಾ ಅವರಿಗೆ ತಲಾ 15 ಹಾಗೂ 10 ಸಾವಿರ ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಯಿತು.

ಸ್ನಾತಕ ವಿಭಾಗದ ಡೀನ ಡಾ. ಸ್ವಪ್ನಾ ಕುಮಾರಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಮಂಜುನಾಥ ಭಟ್ ಇದ್ದರು.ಪ್ರಾಧ್ಯಾಪಕಿ ಡಾ. ಗೀತಾ ಮಾರ್ಕೆಂಡೆ ನಿರೂಪಿಸಿ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಚಾರ‍್ಯ ಡಾ. ಸುಶೀಲ್ ಶೆಟ್ಟಿ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಮಂಜುನಾಥ ಭಟ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ