ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜ್‌: ಎನ್‌ಬಿಎ ಮಾನ್ಯತೆ ಮೂರು ವರ್ಷ ವಿಸ್ತರಣೆ

KannadaprabhaNewsNetwork |  
Published : May 16, 2026, 01:45 AM IST
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೂರು ವಿಭಾಗಗಳ ಗುಣಮಟ್ಟಕ್ಕೆ ಎನ್‌ಬಿಎ ಮುದ್ರೆಸತತ ಮೂರನೇ ಬಾರಿ ಎನ್‌ಬಿಎ  ಮಾನ್ಯತೆ | Kannada Prabha

ಸಾರಾಂಶ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ.

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ ಇನ್ಫರ್ಮೇಶನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್‌ಬಿಎ ಮಾನ್ಯತೆ ದೊರೆತಿದೆ.

ಆಳ್ವಾಸ್ ಸಂಸ್ಥೆಗೆ ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ದೊರೆತಿರುವುದು ಶಿಕ್ಷಣದ ಗುಣಮಟ್ಟ, ಆಧುನಿಕ ಪ್ರಯೋಗಾಲಯ ಸೌಲಭ್ಯ, ಅನುಭವ ಸಂಪನ್ನ ಬೋಧಕ ವೃಂದ ಹಾಗೂ ಕೈಗಾರಿಕಾ ಸಂಪರ್ಕಗಳ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ.

ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗಗಳಿಗೆ 2025ರ ಜುಲೈ 1ರಿಂದ 2028ರ ಡಿಸೆಂಬರ್ 31ರವರೆಗೆ ಮಾನ್ಯತೆ ನೀಡಲಾಗಿದ್ದು, ಇನ್ಫರ್ಮೇಶನ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗಕ್ಕೆ 2026ರ ಜನವರಿ 1ರಿಂದ 2028ರ ಡಿಸೆಂಬರ್ 31ರವರೆಗೆ ಮಾನ್ಯತೆ ಅನ್ವಯವಾಗಲಿದೆ.ದೆಹಲಿಯ ಎನ್‌ಬಿಎ (ರಾಷ್ಟ್ರೀಯ ಮಾನ್ಯತಾ ಮಂಡಳಿಯ) ತಜ್ಞರ ತಂಡವು ಕಾಲೇಜಿನ ಇಂಜಿನಿಯರಿಂಗ್ ವಿಭಾಗಗಳ ಮೂಲ ಸೌಕರ್ಯ, ಬೋಧನೆ ಮತ್ತು ಕಲಿಕೆಯ ವಿಧಾನಗಳು, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳು, ಪ್ರಕಟಣೆಗಳು, ಉದ್ಯಮಶೀಲ ಅಭಿವೃದ್ಧಿ ಚಟುವಟಿಕೆಗಳು, ವಿವಿಧ ರಾಜ್ಯ ಮತ್ತು ಕೇಂದ್ರ ಹಣಕಾಸು ಸಂಸ್ಥೆಗಳ ಅನುದಾನಗಳು, ವಿವಿಧ ಸಂಶೋಧನಾ ಸಂಸ್ಥೆಗಳು ಹಾಗೂ ಕೈಗಾರಿಕೆಗಳೊಂದಿಗೆ ಒಡಂಬಡಿಕೆಗಳನ್ನು ಪರಿಶೀಲಿಸಿ ಮೌಲ್ಯಮಾಪನ ನಡೆಸಿದೆ.

ಎನ್‌ಬಿಎ ಮಾನ್ಯತೆ ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಅಳೆಯುವ ಪ್ರಮುಖ ಮಾನದಂಡವಾಗಿದ್ದು, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ. ಎನ್‌ಬಿಎ ಮಾನ್ಯತೆ ಪಡೆದ ಕೋರ್ಸ್ಗಗಳಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳ ಪ್ರವೇಶದಲ್ಲಿ ಹೆಚ್ಚುವರಿ ಮಾನ್ಯತೆ ದೊರೆಯುತ್ತದೆ. ಇದರೊಂದಿಗೆ ಶಿಕ್ಷಣದ ಗುಣಮಟ್ಟ, ಪಠ್ಯಕ್ರಮ, ಪ್ರಯೋಗಾಲಯ ಸೌಲಭ್ಯ, ಅಧ್ಯಾಪಕರ ಸಾಮರ್ಥ್ಯ ಹಾಗೂ ಕೈಗಾರಿಕಾ ಸಂಪರ್ಕಗಳನ್ನು ನಿರಂತರವಾಗಿ ಸುಧಾರಿಸಲು ಸಹಕಾರಿಯಾಗುತ್ತದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಪುತ್ತೂರು ಪರಿಕಲ್ಪನೆಯಲ್ಲಿ ಮೂಡಿ ಬಂದ ಬಯೋ ಸಿಎನ್‌ಜಿ ಘಟಕ ''''''''ಕಸದಿಂದ ರಸ''''''''
ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ಕಾಂಗ್ರೆಸ್‌ ನೀತಿ: ಶಾಸಕ ವೇದವ್ಯಾಸ್‌ ಕಾಮತ್‌