ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿಯ ಮಾರಿಯಮ್ಮನ ಸನ್ನಿಧಾನ ಶರನ್ನವರಾತ್ರಿ ಮಹೋತ್ಸವ ಮತ್ತು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಎಂ. ಮೋಹನ್ ಆಳ್ವ ಮತ್ತು ಮಾಹೆ ವಿವಿಯ ಉಪಕುಲಪತಿ ಡಾ. ಎಚ್ ಎಸ್ ಬಲ್ಲಾಳ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ನಂತರ ಮಾತನಾಡಿದ ಡಾ. ಆಳ್ವ ಅವರು, ಬಹಳ ಪುರಾತನ ಸಂಸ್ಕೃತಿ ಇರುವಂತಹ ಈ ದೇವಳದ ಅಭಿವೃದ್ಧಿ ದೇಶಕ್ಕೆ, ರಾಜ್ಯಕ್ಕೆ ಮಾದರಿಯಾಗಿದೆ, ಇಲ್ಲಿ ನಡೆಯುತ್ತಿರುವ ನವದುರ್ಗಾ ಲೇಖನ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಭಕ್ತರು ಪಾಲ್ಗೊಳ್ಳಬೇಕು ಎಂದರು.ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ ಅವರು ಉಚ್ಚಂಗಿ-ಮಾರಿಯಮ್ಮನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉದ್ಯಮಿ ಆನಂದ್ ಎಂ. ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಪಂ ಸಿಇಓ ಪ್ರತೀಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್, ಉದ್ಯಮಿ ಕೆ. ಎಂ ಶೆಟ್ಟಿ ಆಗಮಿಸಿದ್ದರು.ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಧಾರ್ಮಿಕ ಸಮಿತಿಯ ಪ್ರಧಾನ ಸಂಚಾಲಕ ಕೆ. ಭಗವಾನ್ ದಾಸ್ ಮತ್ತಿತರರಿದ್ದರು.