ಸಂವಿಧಾನ ಜನಜೀವನದ ಜೀವಾಳ: ಡಾ. ಪ್ರಮೋದ್‌

KannadaprabhaNewsNetwork |  
Published : Aug 21, 2026, 04:00 AM IST
ಆಳ್ವಾಸ್‌ನಲ್ಲಿ ‘ಅಂಬೇಡ್ಕರ್ ಓದು’ | Kannada Prabha

ಸಾರಾಂಶ

ಸಂವಿಧಾನವು ನಮ್ಮ ಜನಜೀವನದ ಜೀವಾಳವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕನ ಭಾವನೆ, ಹಕ್ಕು ಹಾಗೂ ಸ್ವಾತಂತ್ರ್ಯಗಳಿಗೆ ಸ್ಪಂದಿಸುವ ಮಹತ್ವದ ದಾಖಲೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ದೊರೆತ ಗಾಢ ಜೀವನಾನುಭವ ಹಾಗೂ ಆಧುನಿಕ ಶಿಕ್ಷಣದ ಫಲವಾಗಿ ಜೀವಪರವಾದ ಸಂವಿಧಾನ ರೂಪುಗೊಂಡಿದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ.ಜಿ. ನುಡಿದರು.

ಮೂಡುಬಿದಿರೆ: ಸಂವಿಧಾನವು ನಮ್ಮ ಜನಜೀವನದ ಜೀವಾಳವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕನ ಭಾವನೆ, ಹಕ್ಕು ಹಾಗೂ ಸ್ವಾತಂತ್ರ್ಯಗಳಿಗೆ ಸ್ಪಂದಿಸುವ ಮಹತ್ವದ ದಾಖಲೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ದೊರೆತ ಗಾಢ ಜೀವನಾನುಭವ ಹಾಗೂ ಆಧುನಿಕ ಶಿಕ್ಷಣದ ಫಲವಾಗಿ ಜೀವಪರವಾದ ಸಂವಿಧಾನ ರೂಪುಗೊಂಡಿದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ.ಜಿ. ನುಡಿದರು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಆಯೋಜಿಸಿದ್ದ ‘ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನನ್ನು ಮನುಷ್ಯನಂತೆ ಕಾಣುವ ಮತ್ತು ಗೌರವದಿಂದ ವ್ಯವಹರಿಸುವ ಗುಣ ಪ್ರತಿಯೊಬ್ಬರಲ್ಲೂ ಬೆಳೆಬೇಕು ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಆಸಕ್ತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪ್ರಥಮ ಬಿಎ ವಿದ್ಯಾರ್ಥಿನಿ ನಿರೀಕ್ಷಾ ಎನ್. ಪೂಜಾರಿ, ದ್ವಿತೀಯ ಸ್ಥಾನವನ್ನು ತೃತೀಯ ಬಿ.ಎ. ವಿದ್ಯಾರ್ಥಿ ವೀರಭದ್ರ ಹಾಗೂ ತೃತೀಯ ಸ್ಥಾನವನ್ನು ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸಿಂಚನ ಪಡೆದುಕೊಂಡರು. ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಅಪ್ಸನಾ ಬೇಗಂ ನದಾಫ್ ಪ್ರಥಮ, ದ್ವಿತೀಯ ಬಿಎ ವಿದ್ಯಾರ್ಥಿನಿ ಕವಿತಾ ಎಚ್. ದ್ವಿತೀಯ ಹಾಗೂ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ತೇಜಸ್ವಿನಿ ಶಿವಪ್ರಸಾದ್ ತೃತೀಯ ಸ್ಥಾನ ಗಳಿಸಿದರು.

ಕಾರ್ಯಕ್ರಮದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಪ್ರಸ್ತಾವನೆಗೈದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ದಿನೇಶ್ ಉಪ್ಪಾರ ಸ್ಪರ್ಧೆಗಳ ವಿಜೇತರ ವಿವರಗಳನ್ನು ವಾಚಿಸಿದರು. ವಿದ್ಯಾರ್ಥಿನಿ ಕುರ್ರತ್ ಉಲೈನ್ ನಿರೂಪಿಸಿದರು. ವಿದ್ಯಾರ್ಥಿ ಲಿಖಿತ್ ಆಶಯ ಗೀತೆ ಹಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ
ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸ್ಮರಣೀಯ: ಡಾ.ಆನಂದ ಕೆ.