ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ 12 ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಮೂಡುಬಿದಿರೆ: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ 12 ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಆಳ್ವಾಸ್ ತಂಡವು ಪುರುಷರ ಮತ್ತು ಮಹಿಳೆಯರ ವಿಭಾಗದ ಕಬಡ್ಡಿ, ಖೋ-ಖೋ, ಬಾಲ್ ಬ್ಯಾಡ್ಮಿಂಟನ್, ಕುಸ್ತಿ, ಅಥ್ಲೆಟಿಕ್ಸ್ ಹಾಗೂ ಯೋಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್‌ನಲ್ಲಿ ಒಟ್ಟು 16 ಚಿನ್ನ, 17 ಬೆಳ್ಳಿ, 01 ಕಂಚು, ಕುಸ್ತಿಯಲ್ಲಿ ಒಟ್ಟು 10 ಚಿನ್ನ, 10 ಬೆಳ್ಳಿ, 05 ಕಂಚು, ಯೋಗಾಸನ ಸ್ಪರ್ಧೆಯಲ್ಲಿ ಒಟ್ಟು 05 ಚಿನ್ನ, 08 ಬೆಳ್ಳಿ 03 ಕಂಚು ಪದಕ ಪಡೆದುಕೊಂಡಿದ್ದಾರೆ.ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಈ 12 ವಿಭಾಗಗಳಿಂದಲೂ ಆಳ್ವಾಸ್‌ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ವಿಜೇತ ಕ್ರೀಡಾಪಟುಗಳನ್ನು ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.