ಬ್ರಹ್ಮಾವರ: ಸಾಂಸ್ಕೃತಿಕ ಚಟುವಟಿಕೆಗಳೇ ನಮ್ಮ ದೇಶದ ಸಂಪತ್ತು, ನಮ್ಮ ನಾಗರೀಕತೆ ಹುಟ್ಟಿ 5 ಸಾವಿರ ವರ್ಷಗಳಾಗಿದೆ. ಈ ಅವಧಿಯಲ್ಲಿ ಸುಮಾರು 36 ಸಾವಿರ ರಾಗಗಳು, ಅದಕ್ಕೆ ಪೂರಕ ನೂರಾರು ವಾದ್ಯೋಪಕರಣಗಳನ್ನು ಕೂಡ ಕಂಡು ಹಿಡಿಯಲಾಗಿದೆ. ಈ ಸಾಂಸ್ಕೃತಿಕ ವೈಭವವನ್ನು ಉಳಿಸಿಕೊಂಡು ಮುಂದಕ್ಕೆ ಕೊಂಡೊಯ್ಯಬೇಕು ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.
ಕಾರ್ಯಕ್ರಮವನ್ನು ಮತ್ಸ್ಯೋದ್ಯಮಿ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಅತಿಥಿಗಳಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನ ಅಧ್ಯಕ್ಷ ಉದಯ್ ಹೆಗ್ಡೆ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ ಹುಬ್ಬಳ್ಳಿ, ಬ್ರಹ್ಮಾವರ ತಾಲೂಕು ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷ ಅಶೋಕ ಭಟ್, ಉದ್ಯಮಿ ಶಾಂತಾರಾಮ ಶೆಟ್ಟಿ ಬಾರಕೂರು, ಜಿಪಂ ಮಾಜಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಬಿಲ್ಲವ ಮಹಾಮಂಡಲದ ರಾಷ್ಟ್ರೀಯ ಉಪಾಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷ ಎಚ್. ಸುದರ್ಶನ್ ಹೆಗ್ಡೆ, ಬಾರಕೂರು ಕಚ್ಚೂರು ಶ್ರೀ ಕ್ಷೇತ್ರದ ಗೊಕುಲ್‌ದಾಸ್ ಬಾರಕೂರು, ಅಜಪುರ ಕರ್ನಾಟಕ ಸಂಘದ ಅಧ್ಯಕ್ಷ ಎಚ್. ನಿತ್ಯಾನಂದ ಶೆಟ್ಟಿ, ಜಿ.ಎಮ್.ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಎಸ್ಎಂಎಸ್ ಕೆಥೆಡ್ರಲ್ ಸಹಾಯಕ ಗುರು ರೆವರೆಂಡ್ ಫಾದರ್ ಡೇವಿಡ್ ಕ್ರಾಸ್ತಾ ಮೊದಲಾದವರು ಉಪಸ್ಥಿತರಿದ್ದರು.
ಬ್ರಹ್ಮಾವರ ಫೌಂಡೇಶನ್ ಅಧ್ಯಕ್ಷ ಬಿ.ಗೋವಿಂದರಾಜ್ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.