ಆಳ್ವಾಸ್‌ ಕಾನೂನು ಮಹಾವಿದ್ಯಾಲಯ ಆರಂಭ

KannadaprabhaNewsNetwork |  
Published : Sep 11, 2024, 01:11 AM IST
32 | Kannada Prabha

ಸಾರಾಂಶ

ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯ ಆರಂಭಿಸುತ್ತಿದ್ದು 2024-25ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ 60 2 ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸುವ ಅನುಮತಿ ದೊರೆತಿದೆ. ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಲಾಗಿದೆ ಎಂದರು.

ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು 3 ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೊಳ್ಳಲು ಅರ್ಹತೆ ಪಡೆಯುತ್ತಾರೆ. ಹಾಗೂ ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಂ ಎಲ್ಎಲ್‌ಬಿ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ.

ವಿಶಾಲ ಸುಸಜ್ಜಿತ ಕಾನೂನು ಗ್ರಂಥಾಲಯ, ಮೂಟ್ ಕೋರ್ಟ್ ಮತ್ತು ಇತರ ಎಲ್ಲ ಮೂಲಭೂತ ಸೌಕಯ್ಯಗಳೊಂದಿಗೆ ವಿದ್ಯಾಗಿರಿಯಲ್ಲಿ ಕಾಲೇಜು ಈಗಾಗಲೇ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾಗಿದೆ. ಸಮಾಜಕಾರ, ಪ್ರತಿಕೋದ್ಯಮ, ಎಂಬಿಎ, ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್, ಸಿಎ, ಸಿಎಸ್ ಪದವೀಧರರು ಕಾನೂನು ಶಿಕ್ಷಣ ಪಡೆದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ನೈಪುಣ್ಯತೆ ಪಡೆಯುವುದರೊಂದಿಗೆ ಹೆಚ್ಚಿನ ಉದ್ಯೋಗದ ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ