ಆಳ್ವಾಸ್‌ ದೈಹಿಕ ಶಿಕ್ಷಣ ಕಾಲೇಜ್‌: ಅಂತರ್‌ ಕಾಲೇಜು ಖೋಖೋ ಪಂದ್ಯಾಟ

KannadaprabhaNewsNetwork |  
Published : Mar 19, 2025, 12:31 AM IST
ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ  ಡಾ ಜೆರಾಲ್ಡ್ ಡಿ ಸೋಜಾ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡುಬಿದಿರೆ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ನೆರವೇರಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ದೇಸಿ ಕ್ರೀಡೆ ಖೋ ಖೋ ಎಲ್ಲಾ ಕ್ರೀಡೆಗಳಿಗೆ ಅಡಿಪಾಯವಿದ್ದಂತೆ. ಈ ಆಟ ಪ್ರೋತ್ಸಾಹಿಸುವ ಮೂಲಕ ಯುವಜನತೆಯಲ್ಲಿ ಶಾರೀರಿಕ ಹಾಗೂ ಮಾನಸಿಕ ಸಿದ್ಧತೆ ಹೆಚ್ಚಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ ಜೆರಾಲ್ಡ್ ಡಿ ಸೋಜಾ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಮನೋಭಾವ ನಮ್ಮನ್ನು ಈ ಕ್ಷೇತ್ರದಲ್ಲಿ ಹೆಚ್ಚಿನದ್ದನ್ನು ಸಾಧಿಸಲು ಸಹಕಾರಿಯಾಗುತ್ತದೆ. ಅಂತರ್ ಕಾಲೇಜು ಪಂದ್ಯಾಟವು ಎಲ್ಲಾ ಕ್ರೀಡಾಳುಗಳನ್ನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿರುತ್ತದೆ ಎಂದರು.

ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹಿಂದೆಲ್ಲ ದೇಸಿ ಕ್ರೀಡೆಯಾದ ಖೋ-ಖೋ ಆಟವು ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾಗಿತ್ತು. ಆದರೆ, ಇಂದು ಕ್ರೀಡೆಯಲ್ಲಿನ ಬೆಳವಣಿಗೆಯು ದೇಸಿ ಕ್ರೀಡೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸುವತ್ತ ಕೊಂಡೊಯ್ಯುತ್ತಿರುವುದು ಬಹಳ ಹೆಮ್ಮೆ ಮತ್ತು ಸಂತಸದ ಸಂಗತಿ ಎಂದರು.

ಕ್ರೀಡಾ ಕ್ಷೇತ್ರಕ್ಕೆ ಮಂಗಳೂರು ವಿಶ್ವವಿದ್ಯಾಲಯ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಸದಾ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರೀಡಾಪಟುಗಳಿಗೆ, ಕ್ರೀಡಾ ಪೋಷಕರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರಕುವಂತಾಗಲಿ ಎಂದು ಆಶಿಸಿದರು.

ಖೋ-ಖೋ ಕ್ರೀಡೆಯಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆಗೈದ ಸಂಸ್ಥೆಯ ಪ್ರತಿಭಾನ್ವಿತ ಕ್ರೀಡಾಪಟುಗಳಾದ ಮರಿಯಪ್ಪ, ದಿವ್ಯ ಕೆ ಆರ್ ಮತ್ತು ನಿಖಿಲ್ ಬಿ ಅವರನ್ನು ಗೌರವಿಸಲಾಯಿತು.

ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ, ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್ ಇದ್ದರು.

ಟೂರ್ನಮೆಂಟ್‌ನಲ್ಲಿ ಪುರುಷರ ವಿಭಾಗದಿಂದ 18 ತಂಡ ಮತ್ತು ಮಹಿಳೆಯರ ವಿಭಾಗದಿಂದ 18 ತಂಡಗಳು ಭಾಗವಹಿಸಿದ್ದವು.

ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿದರು. ದೈಹಿಕ ಶಿಕ್ಷಣ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಉದಯಕುಮಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ