ಕನ್ನಡಪ್ರಭ ವಾರ್ತೆ ಸಕಲೇಶಪುರ
ಕಲೆಗಳು ನಶಿಸುತ್ತಿರುವ ಈ ಹೊತ್ತಿನಲ್ಲಿ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುವ ಮೂಲಕ ನಾಡಿನಾದ್ಯಂತ ವಿವಿಧ ಕಲೆಗಳನ್ನು ಪಸರಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದ ಎಪಿಎಂಸಿ ಆವರಣದಲ್ಲಿ ಫೆ. ತಿಂಗಳ ಏಳರಂದು ಶುಕ್ರವಾರ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂದು ಸಂಜೆ ೫ ಗಂಟೆಯಿಂದ ಆರಂಭವಾಗಲಿರುವ ಸಾಂಸ್ಕೃತಿಕ ವೈಭವದಲ್ಲಿ ಸುಮಾರು ೩೫೦ಕ್ಕೂ ಅಧಿಕ ವಿದ್ಯಾರ್ಥಿಗಳು ದೇಶ, ವಿದೇಶದ ನೃತ್ಯ ರೂಪಕಗಳನ್ನು ಪರಿಚಯ ಮಾಡಿಕೊಡಲಿದ್ದಾರೆ. ಆದ್ದರಿಂದ ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಜುನಾಥ್, ಅಕ್ಕಮಹಾದೇವಿ ಮಹಿಳಾ ವೇದಿಕೆ ಅಧ್ಯಕ್ಷೆ ಕೋಮಲಾ ದಿನೇಶ್, ಯುವ ವೇದಿಕೆ ಅಧ್ಯಕ್ಷ ಮಳಲಿ ಸ್ವಾಮಿ, ಮುಖಂಡರಾದ ದಿವಾನ್, ಮಠಸಾಗರ ಶ್ರೀಧರ್, ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.