ಸಂಶೋಧನೆಯೊಂದಿಗೆ ಪ್ರಕೃತಿ ಚಿಕಿತ್ಸೆ ಬೆಳೆಸಿ: ಡಾ. ಅರುಣ್ ಪಿ.ಜಿ.

KannadaprabhaNewsNetwork |  
Published : Nov 19, 2026, 02:45 AM IST
ಡಾ. ಅರುಣ್ ಪಿ.ಜಿ. | Kannada Prabha

ಸಾರಾಂಶ

ಪ್ರಕೃತಿ ಚಿಕಿತ್ಸೆಯನ್ನು ಕೇವಲ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಿಗೆ ಸೀಮಿತಗೊಳಿಸದೆ, ವೈಜ್ಞಾನಿಕ ಸಂಶೋಧನೆ ಹಾಗೂ ಇತರ ವೈದ್ಯಕೀಯ ಪದ್ಧತಿಗಳೊಂದಿಗಿನ ಸಹಯೋಗದ ಮೂಲಕ ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಸುವ ಅಗತ್ಯವಿದೆ ಎಂದು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ. ಅರುಣ್ ಪಿ.ಜಿ. ನುಡಿದರು.

ಮೂಡುಬಿದಿರೆ: ಪ್ರಕೃತಿ ಚಿಕಿತ್ಸೆಯನ್ನು ಕೇವಲ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಿಗೆ ಸೀಮಿತಗೊಳಿಸದೆ, ವೈಜ್ಞಾನಿಕ ಸಂಶೋಧನೆ ಹಾಗೂ ಇತರ ವೈದ್ಯಕೀಯ ಪದ್ಧತಿಗಳೊಂದಿಗಿನ ಸಹಯೋಗದ ಮೂಲಕ ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಸುವ ಅಗತ್ಯವಿದೆ ಎಂದು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ. ಅರುಣ್ ಪಿ.ಜಿ. ನುಡಿದರು.

ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಸೋಮವಾರ ನಡೆದ 9ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಯಾವುದೇ ವೈದ್ಯಕೀಯ ಪದ್ಧತಿಯನ್ನು ತಿರಸ್ಕರಿಸುವ ಬದಲು, ಇತರ ವೈದ್ಯಕೀಯ ಪದ್ಧತಿಗಳೊಂದಿಗೆ ಸಹಯೋಗದ ಸಂಶೋಧನೆ ನಡೆಸುವುದು ಅಗತ್ಯ. ಚಿಕಿತ್ಸೆಯ ಮೂಲ ಉದ್ದೇಶ ರೋಗಿಗೆ ಉತ್ತಮ ಆರೋಗ್ಯ ಫಲಿತಾಂಶ ಒದಗಿಸುವುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೋಮಿಯೋಪಥಿ ಕಾಲೇಜಿನ ಪ್ರಾಚರ‍್ಯ ಡಾ ರೋಶನ್ ಪಿಂಟೋ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳ ಜವಾಬ್ದಾರಿ ದೊಡ್ಡದಿದ್ದು, ತಮ್ಮ ವಿಷಯದಲ್ಲಿ ಆಳವಾದ ಜ್ಞಾನ ಸಂಪಾದಿಸಬೇ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಆಡಳಿತಾಧಿಕಾರಿ ಡಾ ಪ್ರಜ್ಞಾ ಆಳ್ವ ಇದ್ದರು. ಆಶಾದ್ ವಿಜೇತರ ಹೆಸರುಗಳನ್ನು ವಾಚಿಸಿ, ಡಾ. ಜ್ಯೋತಿ ಸ್ವಾಗತಿಸಿ, ಡಾ ಭೂಮಿಕಾ ವಂದಿಸಿ, ಶಿಭಾನಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ