ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್‌ಗೆ ರಂಗಭೂಮಿ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Feb 05, 2025, 12:33 AM IST
4ಭಾಸ್ಕರ | Kannada Prabha

ಸಾರಾಂಶ

ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ 2ನೇ ದಿನ ಭಾನುವಾರ ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅನನ್ಯ ಕೊಡುಗೆಗಾಗಿ ‘೨೦೨೫ನೇ ಸಾಲಿನ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ 2ನೇ ದಿನ ಭಾನುವಾರ ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅನನ್ಯ ಕೊಡುಗೆಗಾಗಿ ‘೨೦೨೫ನೇ ಸಾಲಿನ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತಾಡಿದ ಡಾ.ಭಾಸ್ಕರಾನಂದ ಕುಮಾರ್, ಬಾಲ್ಯದಲ್ಲಿಯೇ ರಂಗಭೂಮಿಯತ್ತ ಸೆಳೆತವಿದ್ದ ತಾನು ಮುಂದೆ ಯಕ್ಷಗಾನ ಕ್ಷೇತ್ರದಲ್ಲೂ ಹವ್ಯಾಸಿ ಕಲಾವಿದನಾಗಿ ನನ್ನಿಂದಾದಷ್ಟು ಕಲಾ ಸೇವೆ ಮಾಡಿದ್ದೇನೆ. ವೈದ್ಯ ವೃತ್ತಿಯಲ್ಲಿ ನಡೆಸಿದ ನನ್ನ ಕೆಲವೊಂದು ಸಾಧನೆಗಳು ವಿಶ್ವ ಮಾನ್ಯತೆ ತಂದುಕೊಟ್ಟಿದೆ. ಇದೀಗ ರಂಗಭೂಮಿ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ ಎಂದರು.ಮಂಗಳೂರಿನ ಶಾರದಾ ಸಮೂಹ ಸಂಸ್ಥೆಯ ಪ್ರೊ. ಎಂ.ಬಿ. ಪುರಾಣಿಕ್, ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಶುಭ ಹಾರೈಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಡಾ.ಭಾಸ್ಕರಾನಂದ ಕುಮಾರ್ ಅವರ ವಾಲಿ ಸೇರಿದಂತೆ ಯಕ್ಷಗಾನದ ವಿವಿಧ ಪಾತ್ರಗಳು ಸಭಿಕರನ್ನು ಮನಸೆಳೆದಿವೆ. ಹವ್ಯಾಸಿ ಕಲಾವಿದನಾಗಿ, ಓರ್ವ ವೈದ್ಯನಾಗಿ ಅವರು ನಡೆಸಿದ ಕಲಾಸೇವೆ, ಕಲಾವಿದರಿಗೆ ನೀಡಿದ ನೆರವು ಪ್ರಶಂಸನೀಯ. ಅವರಿಗೆ ಈ ರಂಗಭೂಮಿ ಪ್ರಶಸ್ತಿ ಸಲ್ಲುತ್ತಿರುವುದು ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿದೆ ಎಂದರು.ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ರಂಗಭೂಮಿ ಉಡುಪಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷರಾದ ಎನ್.ಆರ್.ಬಲ್ಲಾಳ್ ಹಾಗೂ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು. ರಂಗಭೂಮಿ ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಸ್ವಾಗತಿಸಿದರು. ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್‌ ಅಧ್ಯಕ್ಷ ಎಚ್.ಜಯಪ್ರಕಾಶ್ ಕೆದ್ಲಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ವಿಷ್ಣುಮೂರ್ತಿ ನಿರೂಪಿಸಿದರು. ಶ್ರೀಪಾದ ಹೆಗಡೆ ವಂದಿಸಿದರು.ಸಭಾ ಕಾರ್ಯಕ್ರಮದ ನಂತರ ರಂಗರಥ ಟ್ರಸ್ಟ್ ಬೆಂಗಳೂರು ತಂಡದಿಂದ ಸಾಂಸಾರಿಕ ಹಾಸ್ಯ ನಾಟಕ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಪ್ರದರ್ಶನ ಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!