ವಾಯು ಮತ್ತು ಜಲಮಾಲಿನ್ಯ ಖಂಡಿಸಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ಬುಧವಾರ ತೀವ್ರ ಸ್ವರೂಪ
ಪ್ರತಿಭಟನೆ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಅಸ್ವಸ್ಥರಾದರೆ, ಮತ್ತೊಂದೆಡೆ ರೈತರು ರಸ್ತೆ ಮಧ್ಯೆಯೇ ರಾಸುಗಳನ್ನು ಕಟ್ಟಿ ಮೇವು ಹಾಕುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಂದ ಹೊರಬರುತ್ತಿರುವ ಹೊಗೆ ಹಾಗೂ ಕಲುಷಿತ ನೀರಿನಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಹಾಗೂ ನೂರಾರು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದರು.ಚಿಕ್ಕಮಗಳೂರು ನಗರದಿಂದ ಕೂಗಳತೆ ದೂರದ ಕೈಗಾರಿಕಾ ಪ್ರದೇಶದ ಮಾಲಿನ್ಯದಿಂದ ಜನ ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ. ಗಾಳಿ ಮತ್ತು ನೀರು ಸಂಪೂರ್ಣ ಕಲುಷಿತಗೊಂಡಿದ್ದು, ನೆಮ್ಮದಿಯಿಂದ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
15 ದಿನದಲ್ಲಿ ಡ್ರೋನ್ ಸರ್ವೇ, ಹೊಸ ಪ್ರಸ್ತಾವನೆ: ಡಿಸಿ
ಈ ಸಂದರ್ಭದಲ್ಲಿ ಮಾತನಾಡಿ ಮುಂದಿನ 15 ದಿನಗಳಲ್ಲಿ ಡ್ರೋನ್ ಸರ್ವೇ ನಡೆಸಿ ರಸ್ತೆ, ಪೆರಿಫೆರಲ್ ರಸ್ತೆ ಸೇರಿದಂತೆ ಅಗತ್ಯ ತಿದ್ದುಪಡಿಗಳೊಂದಿಗೆ ಕೈಗಾರಿಕಾ ಪ್ರದೇಶದ ಹೊಸ ನಕ್ಷೆ ಸಿದ್ಧಪಡಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿ ಏಕಗವಾಕ್ಷಿ ಯೋಜನೆಯಡಿ ಅನುಮೋದನೆ ಪಡೆದು, ಪರಿಷ್ಕೃತ ಕೈಗಾರಿಕಾ ನಕ್ಷೆ ಮಂಜೂರಾತಿಗೆ ಕೆಐಎಡಿಬಿಗೆ ಪ್ರಸ್ತಾವನೆ ಸಲ್ಲಿಸ ಲಾಗುವುದು ಎಂದು ಭರವಸೆ ನೀಡಿದರು.
ಕೆಐಎಡಿಬಿ ಹಾಗೂ ಎಡಿಎಲ್‌ಆರ್ ಮೂಲಕ ಕೈಗಾರಿಕಾ ಪ್ರದೇಶದ ಜಂಟಿ ಸರ್ವೇ ನಡೆಸಲು ಆದೇಶಿಸಲಾಗುವುದು. ಕೈಗಾರಿಕೆ ಸ್ಥಾಪನೆಗೆ ಮಂಜೂರಾದ ಜಾಗ ಬಳಕೆಯಾಗದೆ ಉಳಿದಿರುವುದು ಹಾಗೂ ಸಬ್‌ಲೀಸ್ ನೀಡಿರುವ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ನಿಯಮಾನುಸಾರ ಜಾಗ ವಾಪಸ್ ಪಡೆಯಲು ಅವಕಾಶವಿದ್ದಲ್ಲಿ ಅದನ್ನು ವಾಪಸ್ ಪಡೆದು ಸ್ಮಶಾನ ಹಾಗೂ ಗೋಮಾಳಕ್ಕೆ ಮೀಸಲಿಡಲಾಗುವುದು ಎಂದು ತಿಳಿಸಿದರು.
ಕೆರೆಗಳಿಗೆ ಕಲುಷಿತ ನೀರು ಹರಿಸಸಿರಲು ಸೂಚನೆಕೈಗಾರಿಕೆಗಳಿಂದ ಯಾವುದೇ ಕಾರಣಕ್ಕೂ ಕಲುಷಿತ ನೀರನ್ನು ಕೆರೆಗಳಿಗೆ ಹರಿಯದಂತೆ ಕ್ರಮ ವಹಿಸಬೇಕು. ರಸ್ತೆ ಅಭಿವೃದ್ಧಿಗೆ ಆರ್‌ಡಿಪಿಆರ್ ಇಲಾಖೆಯಲ್ಲಿ ಅನುದಾನವಿದ್ದು, ಕ್ರಿಯಾ ಯೋಜನೆ ರೂಪಿಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಕೈಗಾರಿಕೆಗಳು ಎಲ್ಲ ಪರಿಸರ ಮಾನದಂಡ ಪಾಲಿಸುತ್ತಿವೆಯೇ ಎಂಬುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚಿಸಿದರು.
ಕೈಗಾರಿಕೆಗಳಿಗೆ ಕಸ ಶುಲ್ಕ ವಿಧಿಸಿ
ಪ್ರತಿಭಟನೆಯಲ್ಲಿ ಶಾಲಾ ಮಕ್ಕಳು
ಅಂಬಳೆ ಕೈಗಾರಿಕಾ ಪ್ರದೇಶದ ಸಮಸ್ಯೆಗಳನ್ನು ಪರಿಹರಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆಗೆ ಬುಧವಾರ ಶಾಲಾ ಸಮವಸ್ತ್ರ ಧರಿಸಿದ್ದ ಮಕ್ಕಳು ಕೈಜೋಡಿಸಿದರು. ಪ್ರತಿಭಟನೆಯಲ್ಲಿ ಮಕ್ಕಳು ಭಾಗವಹಿಸಿ ಗ್ರಾಮಸ್ಥರ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು.---ಬಾಕ್ಸ್---
ನೋಟಿಸ್‌ಗೆ ಉತ್ತರಿಸಿದ ಕೈಗಾರಿಕೋದ್ಯಮಿಗಳ ವಿರುದ್ಧ ಡಿಸಿ ಗರಂಅಂಬಳೆ ಕೈಗಾರಿಕಾ ಪ್ರದೇಶದಲ್ಲಿನ ಮಾಲಿನ್ಯ ಹಾಗೂ ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮಕ್ಕೆ ಬುಧವಾರ ಕೈಗಾರಿಕೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಕೆಎಸ್‌ಪಿಸಿಬಿಯಿಂದ ನೀಡಲಾದ 33 ಕೈಗಾರಿಕೆಗಳಿಗೆ ನೋಟಿಸ್ ನೀಡಿ 7 ದಿನವಾಗಿದೆ. ಈವರೆಗೆ ಒಂದೇ ಒಂದು ಕೈಗಾರಿಕೆಯಿಂದ ಉತ್ತರ ಬಂದಿಲ್ಲ ಎಂದು ಅಂಬಳೆ ಕೈಗಾರಿಕಾ ಪ್ರದೇಶದ ಮಾಲೀಕರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಅಲ್ಲದೇ ಖುದ್ದು ಅಧಿಕಾರಿ ಸಿಬ್ಬಂದಿ ತೆರಳಿ ಮತ್ತೊಂದು ಬಾರಿ ನೋಟಿಸ್ ಜಾರಿ ಮಾಡುವಂತೆ ಕೆಎಸ್‌ಪಿಸಿಬಿ ಪರಿಸರ ಅಧಿಕಾರಿಗೆ ನಿರ್ದೇಶಿಸಿದರು.ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಪುರುರಾಜ್ ಸಿಂಗ್ ಸೋಲಂಕಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರವಿಪ್ರಸಾದ್, ಜಿಲ್ಲಾ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಸುರೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಇದ್ದರು.