ಅಂಬೇಡ್ಕರ್‌ ಹಾಗೂ ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಹರೀಶ್‌

KannadaprabhaNewsNetwork |  
Published : Feb 18, 2024, 01:32 AM IST
17ಎಚ್ಎಸ್ಎನ್3 :  ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಪಟ್ಟಣಕ್ಕೆಶುಕ್ರವಾರ ಆಗಮಿಸಿದ ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಪಟ್ಟಣಕ್ಕೆಶುಕ್ರವಾರ ಆಗಮಿಸಿದ ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಪೂರ್ಣಕುಂಭ ಸ್ವಾಗತದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಮಹಿಳೆಯರು ಬರಮಾಡಿಕೊಂಡರು. ನಗರದ ಪೇಟೆ ಮುಖ್ಯ ರಸ್ತೆಯಲ್ಲಿ ಸಂವಿಧಾನ ಜಾಗೃತಿ ರಥವನ್ನು ತಹಸೀಲ್ದಾರ್ ಬಸವರೆಡ್ದೆಪ್ಪ ರೋಣದ್ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಸಿರು ಬಾವುಟ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಯಲ್ಲಿ ಮಹಿಳಾ ಸಂಘದ ಕಾರ್ಯಕರ್ತೆಯರು ಪೂರ್ಣಕುಂಭವನ್ನು ಹೊತ್ತು ಸಾಗಿ ಜಾಥಕ್ಕೆ ಮೆರಗು ತಂದರು. ಜಾಥವು ಅ ನ ಕೃ ವೃತ್ತಕ್ಕೆ ಆಗಮಿಸಿದಾಗ ಸಾವಿರಾರು ಮಂದಿ ಬಾಬಾಸಾಹೇಬರ ಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಪಟಾಕಿ ಸಿಡಿಸಿ ಅಭಿಮಾನ ಮೆರೆದರು. ಬಳಿಕ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸಕ ಹರೀಶ್ ಮಾತನಾಡಿ, ಇಡೀ ಸಾಮಾಜಿಕ ವ್ಯವಸ್ಥೆ ಇವತ್ತು ನೆಮ್ಮದಿಯಿಂದ ಬದುಕುತ್ತಿದ್ದೇವೆಂದರೆ ಅದಕ್ಕೆ ಮೂಲ ಕಾರಣ ನಮ್ಮ ದೇಶದ ಸಂವಿಧಾನ ಎಂದು ಹೇಳಿದರು. ಸಂವಿಧಾನ ಮತ್ತು ಬಾಬಾಸಾಹೇಬರು ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ಪ್ರಧಾನಿಯನ್ನು ಪ್ರಶ್ನೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ಕೊಟ್ಟಿದೆ. ಅಧಿಕಾರಕ್ಕೆ ಬರುವ ಸರ್ಕಾರ ಗಳು ನೈತಿಕ ಜವಾಬ್ದಾರಿ ಹೊತ್ತು ಎಲ್ಲಾ ಕೆಲಸಗಳನ್ನು ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಬಹುಜನ ಗೀತೆಗೆ ನೃತ್ಯ ಮಾಡಿ ನೆರೆದಿದ್ದ ಜನರನ್ನು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್. ಇಒ ಡಾ. ಅಶೋಕ್. ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ. ಉಪತಹಸೀಲ್ದಾರ್ ಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಹಾಗೂ ಎಲ್ಲಾ ಸಮಾಜದ ಮುಖಂಡರು. ವಿವಿಧ ಇಲಾಖೆಯ ಅಧಿಕಾರಿಗಳು. ಆಶಾಕಾರ್ಯಕರ್ತೆಯರು ಹಾಜರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ