19ರಂದು ಅಂಬೇಡ್ಕರ್ ಜೀವನ ಚರಿತ್ರೆ ವಿಚಾರ ಸಂಕಿರಣ: ಕುತ್ಯಾರು

KannadaprabhaNewsNetwork |  
Published : Apr 15, 2026, 02:45 AM IST
 | Kannada Prabha

ಸಾರಾಂಶ

ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಉಡುಪಿ: ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಜಿಲ್ಲೆಯ ಎಲ್ಲ ಮಂಡಲಗಳು ಮತ್ತು ಬೂತ್ ಮಟ್ಟದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ಅವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳಾಗಿ ಅಭಿವೃದ್ಧಿಪಡಿಸಿ ಅವರಿಗೆ ವಿಶೇಷ ಗೌರವ ನೀಡಿದೆ. ಏ.19ರಂದು ಪ್ರಬುದ್ಧರಿಗಾಗಿ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್ ಸಿ ಮೋರ್ಚಾ ನೇತೃತ್ವದಲ್ಲಿ ಅಂಬೇಡ್ಕರ್ ಜೀವನ ಚರಿತ್ರೆಯ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದರು.

ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್‍ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್‍ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಜಿಲ್ಲಾ ಕಾರ್‍ಯಾಲಯ ಕಾರ್‍ಯದರ್ಶಿ ಸತ್ಯಾನಂದ ನಾಯಕ್, ನೇಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್‍ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಎಸ್. ನಾರಾಯಣ್, ಉಪಾಧ್ಯಕ್ಷ ಹೆರಿಯ ಉಪ್ಪೂರು, ಕಾರ್‍ಯದರ್ಶಿ ಬೇಬಿ ರಾಜೇಶ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್‍ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸರಲ್ ಆ್ಯಪ್ ಪ್ರಮುಖ್ ಚಂದ್ರಶೇಖರ್ ಪ್ರಭು, ಉಡುಪಿ ನಗರ ಎಸ್ ಸಿ ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು, ಪ್ರಮುಖರಾದ ಲೋಕಯ್ಯ ಪಣಿಯಾಡಿ, ರವೀಂದ್ರ ಪಾಟ್ಕರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಂಡ, ಸೋಮೆಯಂಡ, ಕೊಂಗೆಟೀರ ಭರ್ಜರಿ ಜಯಬೇರಿ
ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸೋಣ: ಜಗದೀಶ್ ಆಚಾರ್ಯ ಕಪ್ಪೆಟ್ಟು