ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ

KannadaprabhaNewsNetwork |  
Published : Apr 15, 2026, 01:45 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ   ಅಂಗವಾಗಿ ಬೇಲೂರು ಬಸ್ ನಿಲ್ದಾಣದಲ್ಲಿ ಶಾಸಕರ ನೇತೃತ್ವದಲ್ಲಿ  ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಸ್ವಚ್ಛ ಭಾರತ''''ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇದು ಒಂದು ದೊಡ್ಡ ಹೆಜ್ಜೆಯಾಗಿದ್ದು ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ಇಂದು ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಸ್ವಚ್ಛತೆಯೇ ಸೇವೆ ಎಂಬ ಸಂದೇಶವನ್ನು ಸಾರುತ್ತಾ, ಸಾರ್ವಜನಿಕ ಸ್ಥಳಗಳನ್ನು ದೂಳು ಮತ್ತು ಕಸಮುಕ್ತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆ ಮತ್ತು ಶಿಸ್ತಿನ ಜೀವನಕ್ಕೆ ಒತ್ತು ನೀಡಿದ್ದರು. ಅವರ ಜನ್ಮದಿನದಂದು ಕೇವಲ ಭಾಷಣ ಮಾಡುವುದಕ್ಕಿಂತ, ಸಮಾಜಕ್ಕೆ ಉಪಯುಕ್ತವಾಗುವಂತಹ ಇಂತಹ ಶ್ರಮದಾನದ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ ಎಂದು ಹೇಳಿದರು.

ಬೇಲೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರು ಕಸಪೊರಕೆ ಹಿಡಿದು ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದರು. ಕಾರ್ಯಕರ್ತರು ಸಹ ಅವರೊಂದಿಗೆ ಕೈಜೋಡಿಸಿದರು. ಈ ಸಂದರ್ಭದಲ್ಲಿ ಶಾಸಕ ಎಚ್ ಕೆ ಸುರೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಭಾರತವನ್ನು ಅಕ್ಷರಶಃ ಮತ್ತು ಸಾಂಸ್ಕೃತಿಕವಾಗಿ ಸ್ವಚ್ಛಗೊಳಿಸುವ ಒಂದು ಜನಪ್ರಿಯ ಆಂದೋಲನವಾಗಿದೆ. ಮಹಾತ್ಮ ಗಾಂಧೀಜಿಯವರ ''''ಸ್ವಚ್ಛ ಭಾರತ''''ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇದು ಒಂದು ದೊಡ್ಡ ಹೆಜ್ಜೆಯಾಗಿದ್ದು ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ಇಂದು ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಸ್ವಚ್ಛತೆಯೇ ಸೇವೆ ಎಂಬ ಸಂದೇಶವನ್ನು ಸಾರುತ್ತಾ, ಸಾರ್ವಜನಿಕ ಸ್ಥಳಗಳನ್ನು ದೂಳು ಮತ್ತು ಕಸಮುಕ್ತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆ ಮತ್ತು ಶಿಸ್ತಿನ ಜೀವನಕ್ಕೆ ಒತ್ತು ನೀಡಿದ್ದರು. ಅವರ ಜನ್ಮದಿನದಂದು ಕೇವಲ ಭಾಷಣ ಮಾಡುವುದಕ್ಕಿಂತ, ಸಮಾಜಕ್ಕೆ ಉಪಯುಕ್ತವಾಗುವಂತಹ ಇಂತಹ ಶ್ರಮದಾನದ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಕೌರಿ ಸಂಜಯ್, ನಗರಾಧ್ಯಕ್ಷ ಮೋಹನ್ ಸಾರಿಗೆ ಇಲಾಖೆಯ ಅಧಿಕಾರಿಗಳು, ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿ ಶ್ರಮದಾನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲರ ಧ್ವನಿಗೆ ಶಕ್ತಿಯಾಗಿದ್ದ ಬಾಬಾ ಸಾಹೇಬರು: ರಮೇಶ್‌ ಬಂಡಿಸಿದ್ದೇಗೌಡ
ಪಾಂಡವಪುರ ಬಸ್ ಡಿಪೋದಲ್ಲಿ ಅಂಬೇಡ್ಕರ್ ಜಯಂತಿ