ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿದ ಅಂಬೇಡ್ಕರ್: ದಲಿತಸೇನೆಯ ಅಧ್ಯಕ್ಷ ಟಿ.ಭರತ್

KannadaprabhaNewsNetwork |  
Published : Dec 09, 2024, 12:50 AM IST
ವಿಜೆಪಿ ೦೮ವಿಜಯಪುರ ಪಟ್ಟಣದ ಕರ್ನಾಟಕ ದಲಿತ ಜನಸೇನೆ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೮ ನೇ ಪರಿನಿರ್ವಾಣ ದಿನದ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ವಿಜಯಪುರ

ಪಟ್ಟಣದ ಕರ್ನಾಟಕ ದಲಿತ ಜನಸೇನೆ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆ ಮಾಡಲಾಯಿತು.

ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದರು.

ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಾಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಅಂಬೇಡ್ಕರ್ ಅವರು ಇಲ್ಲದೇ ಇರುತ್ತಿದ್ದರೆ ದೇಶದಲ್ಲಿ ಇಂದಿಗೂ ಸಹಸ್ರಾರು ಮಂದಿ ನಿತ್ಯ ನರಕವನ್ನು ಅನುಭವಿಸುತ್ತಿದ್ದರು. ಆದ್ದರಿಂದ ಪ್ರತಿಯೊಬ್ಬ ಭಾರತೀಯರು ಅವರನ್ನು ಅರ್ಥ ಮಾಡಿಕೊಳ್ಳಬೇಕು. ಪಟ್ಟಣದ ಪುರಸಭೆಯ ಮುಂಭಾಗದಲ್ಲಿ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಬೇಕು. ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದರು.

ಗಂಗಾಮತಸ್ಥರ ಸಂಘದ ರಾಜ್ಯ ಕಾರ್ಯದರ್ಶಿ ಮುನಿರಾಜು ಮಾತನಾಡಿ, ಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದರು. ಮುಖಂಡ ಚಿನ್ನಪ್ಪ, ಕಣಿತಹಳ್ಳಿ ಮೋಹನ್, ಲೋಕೇಶ್, ಕೆ.ಮುನಿರಾಜು, ಲಾವಣ್ಯ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ